Publish Date: Tue, 22 Jun 2021 (16:50 IST)
Updated Date: Tue, 22 Jun 2021 (16:52 IST)
ಸೌಥಾಂಪ್ಟನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ಸ್ ನಲ್ಲಿ ಟೀಂ ಇಂಡಿಯಾ ಬೌಲರ್ ಗಳು ವಿಕೆಟ್ ಕೀಳಲು ಹೆಣಗಾಡುತ್ತಿರುವುದನ್ನು ನೋಡಿ ನೆಟ್ಟಿಗರು ಭುವನೇಶ್ವರ್ ಕುಮಾರ್ ಅವರನ್ನು ನೆನೆಸಿಕೊಂಡಿದ್ದಾರೆ.
ಶ್ರೀಲಂಕಾ ಪ್ರವಾಸದಲ್ಲಿರುವ ಭುವಿ ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗಿರಲಿಲ್ಲ. ಆದರೆ ಸದ್ಯಕ್ಕೆ ಭಾರತೀಯ ವೇಗಿಗಳು ಬಾಲ್ ಸ್ವಿಂಗ್ ಮಾಡಲು ಕಷ್ಟಪಡುತ್ತಿರುವುದನ್ನು ನೋಡಿದರೆ ಭುವಿಯನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಫ್ಯಾನ್ಸ್ ಹೇಳಿದ್ದಾರೆ.
ಇತ್ತ ಮಾಜಿ ಕ್ರಿಕೆಟಿಗ, ಕಾಮೆಂಟೇಟರ್ ಆಕಾಶ್ ಚೋಪ್ರಾ ಕೂಡಾ ಭುವನೇಶ್ವರ್ ಕುಮಾರ್ ರ ಕೊರತೆ ತಂಡದಲ್ಲಿ ಎದ್ದು ಕಾಣುತ್ತಿದೆ. ಅವರು ತಂಡದಲ್ಲಿ ಇರಬೇಕಿತ್ತು ಎಂದಿದ್ದಾರೆ.