Publish Date: Sun, 19 Jun 2022 (19:37 IST)
Updated Date: Sun, 19 Jun 2022 (19:43 IST)
ಭಾರತ ವಿರುದ್ಧದ 5ನೇ ಹಾಗೂ ಅಂತಿಮ ಟಿ-20 ಪಂದ್ಯಕ್ಕೆ ದಕ್ಷಿಣ ಆಫ್ರಿಕಾ ತಂಡವನ್ನು ಸ್ಪಿನ್ನರ್ ಕೇಶವ್ ಮಹಾರಾಜ್ ಮುನ್ನಡೆಸಲಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಆದರೆ ದಕ್ಷಿಣ ಆಫ್ರಿಕಾ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಗಾಯಗೊಂಡಿರುವ ನಾಯಕ ಭವುಮಾ ಗಾಯದ ಕಾರಣ ನಿರ್ಣಾಯಕ ಪಂದ್ಯದಿಂದ ಹೊರಗುಳಿದಿದ್ದು, ಮಧ್ಯಮ ವೇಗಿ ಕಾಗಿಸೊ ರಬಡಾ ಮರಳಿದ್ದಾರೆ.