ದಂಬುಲಾ: ಮಹಿಳೆಯರ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿದೆ. ಭಾರತ ವಿರುದ್ಧ ಟಾಸ್ ಗೆದ್ದಿರುವ ಪಾಕಿಸ್ತಾನ ಬ್ಯಾಟಿಂಗ್ ಆಯ್ದುಕೊಂಡು ಭಾರತವನ್ನು ಫೀಲ್ಡಿಂಗ್‌ಗೆ ಆಹ್ವಾನಿಸಿದೆ.
ಭಾರತ ತಂಡವು ಒಟ್ಟು ನಾಲ್ಕು ಟೂರ್ನಿಗಳ ಪೈಕಿ 3 ಸಲ ಚಾಮಪಿಯನ್ ಆಗಿ ಹೊರಹೊಮ್ಮಿದೆ. ಈ ಬಾರಿಯೂ ಪ್ರಶಸ್ತಿಯ ನಿರೀಕ್ಷೆಯಲ್ಲಿದೆ. ಭಾರತದ ವನಿತೆಯರ ತಂಡವು ಏಷ್ಯಾ ಕಪ್ ಟಿ20 ಟೂರ್ನಿಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡವಾಗಿದೆ.
ಒಟ್ಟು 20 ಪಂದ್ಯಗಳಲ್ಲಿ 17ರಲ್ಲಿ ಜಯ ಸಾಧಿಸಿ ಅಮೋಘ ಸಾಧನೆ ಮಾಡಿದೆ. ಎರಡು ವರ್ಷಗಳ ಹಿಂದೆ ನಡೆದಿದ್ದ ಟೂರ್ನಿಯ ಫೈನಲ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಜಯಿಸಿತ್ತು.
ಭಾರತ: ಸ್ಮೃತಿ ಮಂದಾನ, ಶಫಾಲಿ ವರ್ಮಾ, ದಯಾಳನ್ ಹೇಮಲತಾ, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ರಿಚಾ ಘೋಷ್, ದೀಪ್ತಿ ಶರ್ಮಾ, ಪೂಜಾ ವಸ್ತ್ರಕರ್, ರಾಧಾ ಯಾದವ್, ಶ್ರೇಯಾಂಕಾ ಪಾಟೀಲ, ರೇಣುಕಾ ಠಾಕೂರ್ ಸಿಂಗ್