ರಾಂಚಿ: ಫೀಲ್ಡಿಂಗ್ ಮಾಡುತ್ತಿದ್ದಾಗ ಭುಜಕ್ಕೆ ಗಾಯ ಮಾಡಿಕೊಂಡು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರಸಕ್ತ ನಡೆಯುತ್ತಿರುವ ತೃತೀಯ ಟೆಸ್ಟ್ ನಿಂದ ಹೊರಗುಳಿಯಲಿದ್ದಾರೆ ಎಂದು ಸುದ್ದಿ ಹರಡಿತ್ತು. ಆದರೆ ಬಿಸಿಸಿಐ ಗುಡ್ ನ್ಯೂಸ್ ಕೊಟ್ಟಿದೆ.
ಗಾಯ ಗಂಭೀರವಲ್ಲ. ಹಾಗಾಗಿ ಅವರು ಈ ಟೆಸ್ಟ್ ಪಂದ್ಯದಲ್ಲಿ ಆಡುವುದನ್ನು ಮುಂದುವರಿಸಲಿದ್ದಾರೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ. ಬೌಂಡರಿ ತಡೆಯುವ ಯತ್ನದಲ್ಲಿ ಕೊಹ್ಲಿ ಬಲ ಭುಜಕ್ಕೆ ಗಾಯಮಾಡಿಕೊಂಡಿದ್ದರು.
ತಕ್ಷಣ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಯಾವುದೇ ಅಪಾಯವಿಲ್ಲ. ವೈದ್ಯಕೀಯ ಪರೀಕ್ಷೆಗಳ ನಂತರ ಗಾಯ ಗಂಭೀರವಲ್ಲ ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು ಬಿಸಿಸಿಐ ಹೇಳಿದೆ. ಹೀಗಾಗಿ ಮೊದಲೇ ಸಂಕಷ್ಟದಲ್ಲಿದ್ದ ಟೀಂ ಇಂಡಿಯಾ ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ