ಮಹಿಳೆಯರ ಟಿ20 ವಿಶ್ವಕಪ್‌ಗೆ ದಿನಗಣನೆ: ಭಾರತ ತಂಡದಲ್ಲಿ ಸ್ಥಾನ ಪಡೆದ ಕನ್ನಡತಿ ಶ್ರೇಯಾಂಕ ಪಾಟೀಲ್‌

Sampriya
ಮಂಗಳವಾರ, 27 ಆಗಸ್ಟ್ 2024 (14:09 IST)
Photo Courtesy X
ಬೆಂಗಳೂರು: ಮಹಿಳೆಯರ ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದು, ಸ್ಮತಿ ಮಂದಾನ ಉಪನಾಯಕಿ ಆಗಿದ್ದಾರೆ. ಕನ್ನಡತಿ ಶ್ರೇಯಾಂಕ ಪಾಟೀಲ್‌ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಕಳೆದ ಆವೃತ್ತಿಯಲ್ಲಿ ಟ್ರೋಫಿ ಗೆದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ಮಿಂಚಿದ್ದ ಸ್ಪಿನ್ನರ್‌ ಶ್ರೇಯಾಂಕದ ತಂಡದಲ್ಲಿ ಸ್ಥಾನ ಪಡೆದಿದ್ದು, ಕರ್ನಾಟಕದ ಅಭಿಮಾನಿಗಳಲ್ಲಿ ಸಂತಸ ಉಂಟುಮಾಡಿದೆ.

ಮಹಿಳೆಯರ ಟ್ವೆಂಟಿ-20 ವಿಶ್ವಕಪ್ ಟೂರ್ನಿ ಅಕ್ಟೋಬರ್ 3ರಿಂದ 20ರವರೆಗೆ ನಡೆಯಲಿದೆ. ಭಾರತ ತಂಡ 'ಎ' ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಇದೇ ಗುಂಪಿನಲ್ಲಿ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳಿವೆ. ಅಲ್ಲದೆ ಭಾರತ ತಂಡವು ಚೊಚ್ಚಲ ಟಿ20 ವಿಶ್ವಕಪ್ ಕಿರೀಟದ ಹುಡುಕಾಟದಲ್ಲಿದೆ.

ದುಬೈಯಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ಸವಾಲನ್ನು ಎದುರಿಸಲಿದೆ. ಅಕ್ಟೋಬರ್ 6ರಂದು ದುಬೈಯಲ್ಲೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಬಳಿಕ ಅಕ್ಟೋಬರ್ 9ರಂದು ದುಬೈಯಲ್ಲಿ ಶ್ರೀಲಂಕಾ ಮತ್ತು ಅಕ್ಟೋಬರ್ 13ರಂದು ಶಾರ್ಜಾದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ.

ಭಾರತ ತಂಡ ಇಂತಿದೆ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶೆಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಯಸ್ತಿಕಾ ಭಾಟಿಯಾ, ಪೂಜಾ ವಸ್ತ್ರಾಕರ್, ಆರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭನಾ, ರಾಧಾ ಯಾದವ್, ಶ್ರೇಯಾಂಕ ಪಾಟೀಲ ಮತ್ತು ಸಂಜನಾ ಸಜೀವನ್.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಿಸಿಸಿಐ ಮುಂದೆ ಥಂಡಾ ಹೊಡೆದು ಏಷ್ಯಾ ಕಪ್ ಟ್ರೋಫಿ ವಾಪಸ್ ಮಾಡಿದ ಮೊಹ್ಸಿನ್ ನಖ್ವಿ

T20 ಕ್ರಿಕೆಟ್‌ ಬ್ಯಾಟಿಂಗ್ ರ್ಯಾಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ಅಭಿಷೇಕ್ ಶರ್ಮಾ

ಯೂತ್‌ ಟೆಸ್ಟ್‌: ಆಸ್ಟ್ರೇಲಿಯಾ ನೆಲದಲ್ಲೂ ಅಬ್ಬರಿಸಿ ಬೊಬ್ಬಿರಿದ 14ರ ಪೋರ ವೈಭವ್ ಸೂರ್ಯವಂಶಿ

ಏಷ್ಯಾ ಕಪ್ ಟ್ರೋಫಿ ಬೇಕಿದ್ರೆ ಸೂರ್ಯಕುಮಾರ್ ನೇ ನನ್ನತ್ರ ಬರಲಿ: ಮೊಹ್ಸಿನ್ ನಖ್ವಿ ಹೊಸ ನಖರಾ

IND vs WI: ಟೀಂ ಇಂಡಿಯಾ ಮುಂದಿನ ಮ್ಯಾಚ್ ಯಾರ ಜೊತೆಗೆ, ಇಲ್ಲಿದೆ ವೇಳಾಪಟ್ಟಿ

ಮುಂದಿನ ಸುದ್ದಿ
Show comments