Publish Date: Mon, 18 Mar 2019 (09:39 IST)
Updated Date: Mon, 18 Mar 2019 (12:44 IST)
ಚೆನ್ನೈ: ಈ ಬಾರಿ ಐಪಿಎಲ್ ನಲ್ಲಿ ಧೋನಿ ಹೆಲಿಕಾಪ್ಟರ್ ಶಾಟ್ ನೋಡುವುದು ಪಕ್ಕಾ. ಈಗಾಗಲೇ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ಪರ ಅಭ್ಯಾಸ ಆರಂಭಿಸಿದ್ದು, ಹೆಲಿಕಾಪ್ಟರ್ ಶಾಟ್ ಪ್ರಾಕ್ಟೀಸ್ ಮಾಡುತ್ತಿದ್ದಾರೆ.
ಸಿಎಸ್ ಕೆ ತಂಡ ತನ್ನ ಟ್ವಿಟರ್ ಪೇಜ್ ನಲ್ಲಿ ಧೋನಿ ಹೆಲಿಕಾಪ್ಟರ್ ಶಾಟ್ ಹೊಡೆಯಲು ಪ್ರಾಕ್ಟೀಸ್ ಮಾಡುತ್ತಿರುವ ವಿಡಿಯೋ ಪ್ರಕಟಿಸಿದ್ದು, ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಿಸಿದೆ.
ಇನ್ನು, ಧೋನಿ ರೀತಿ ಹೆಲಿಕಾಪ್ಟರ್ ಶಾಟ್ ಹೊಡೆಯಲು ಯುವರಾಜ್ ಸಿಂಗ್, ಹಾರ್ದಿಕ್ ಪಾಂಡ್ಯ ಈಗಾಗಲೇ ನೆಟ್ಸ್ ನಲ್ಲಿ ಅಭ್ಯಾಸ ನಡೆಸಿದ್ದಾರೆ. ಆದರೂ ಸ್ವತಃ ಧೋನಿ ಈ ಶಾಟ್ ಹೊಡೆಯುವುದನ್ನು ನೋಡುವ ಮಜವೇ ಬೇರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ