Publish Date: Thu, 30 Jul 2020 (16:48 IST)
Updated Date: Thu, 30 Jul 2020 (16:50 IST)
ಮುಂಬೈ: ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಗೆಳತಿ ನತಾಶಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಅಪ್ಪನಾದ ಖುಷಿಯನ್ನು ಹಾರ್ದಿಕ್ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಇನ್ ಸ್ಟಾಗ್ರಾಂ ಪುಟದಲ್ಲಿ ತಮ್ಮ ಮುದ್ದು ಮಗನ ಫೋಟೋ ಹಾಕಿಕೊಂಡಿರುವ ಹಾರ್ದಿಕ್ ತಮಗೆ ಗಂಡು ಮಗುವಾಗಿರುವ ವಿಚಾರವನ್ನು ತಿಳಿಸಿದ್ದಾರೆ. ಹಾರ್ದಿಕ್ ಗೆ ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ, ಟೆನಿಸ್ ತಾರೆ ಸಾನಿಯಾ ಮಿರ್ಜಾ ಸೇರಿದಂತೆ ಅನೇಕ ಗೆಳೆಯರು, ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.