Publish Date: Sun, 31 Dec 2017 (07:39 IST)
Updated Date: Sun, 31 Dec 2017 (07:52 IST)
ಬೆಂಗಳೂರು: ಕರ್ನಾಟಕದ ಕ್ರಿಕೆಟ್ ಆಟಗಾರ ಮಯಾಂಕ್ ಅಗರ್ವಾಲ್ ಅವರು ತಮ್ಮ ಗೆಳತಿ ಆಶಿತಾ ಸೂದ್ ಅವರೊಂದಿಗೆ ಲಂಡನ್ ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಸಂಗತಿಯನ್ನು ಅವರೇ ಸ್ವತಃ ಮಾಧ್ಯಮವೊಂದರಲ್ಲಿ ಖಚಿತ ಪಡಿಸಿದ್ದಾರೆ.
ಮಯಾಂಕ್ ಹಾಗು ಆಶಿತಾ ಕೆಲವು ವರ್ಷಗಳಿಂದ ಪರಿಚಯಸ್ಥರಾಗಿದ್ದು, ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಇವರ ಮದುವೆಗೆ ಮನೆಯವರ ಒಪ್ಪಿಗೆ ಕೂಡ ಇತ್ತು. ಆದ ಕಾರಣ ಅವರು ಲಂಡನ್ ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಮಯಾಂಕ್ ಅವರು ಆಶಿತಾ ಅವರಿಗೆ ಪ್ರೇಮ ನಿವೇದನೆ ಮಾಡಿಕೊಳ್ಳುತ್ತಿರುವ ಫೋಟೋ ವನ್ನು ಮಯಾಂಕ್ ತಮ್ಮ ಇನ್ಸ್ಟಾಗ್ರಾಂ ನಲ್ಲಿ ಹಾಕಿದ್ದಾರೆ. ಹಾಗೆ ಅದಕ್ಕೆ ಟ್ವೀಟ್ ಕೂಡ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ