Publish Date: Thu, 21 Apr 2022 (06:40 IST)
Updated Date: Thu, 21 Apr 2022 (07:02 IST)
ಮುಂಬೈ: ಕರ್ನಾಟಕ ಮೂಲದ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಮತ್ತು ಬಾಲಿವುಡ್ ನಟ ಸುನಿಲ್ ಶೆಟ್ಟಿ ಪುತ್ರಿ, ನಟಿ ಅಥಿಯಾ ಶೆಟ್ಟಿ ಸದ್ಯದಲ್ಲೇ ವಿವಾಹವಾಗಲಿದ್ದಾರಾ?
ಹೀಗೊಂದು ಸುದ್ದಿ ಹರಿದಾಡುತ್ತಿದೆ. ಬಹಳ ಸಮಯದಿಂದ ಇಬ್ಬರೂ ಡೇಟಿಂಗ್ ನಡೆಸುತ್ತಿದ್ದಾರೆ. ಇವರ ಸಂಬಂಧಕ್ಕೆ ಕುಟುಂಬದವರ ಸಹಮತಿಯೂ ಇದೆ.
ಹೀಗಾಗಿ ಸದ್ಯದಲ್ಲೇ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ ಎಂಬ ಸುದ್ದಿಯಿದೆ. ಇದೇ ವರ್ಷ ಚಳಿಗಾಲದಲ್ಲಿ ಇಬ್ಬರೂ ಮದುವೆಯಾಗುವ ಯೋಜನೆ ಹಾಕಿಕೊಂಡಿದ್ದಾರಂತೆ.