ಬೆಂಗಳೂರು: ಕ್ರೀಡಾಪಟುಗಳಿಗೆ ನೀಡಲಾಗುವ ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿರುವ ಕನ್ನಡಿಗ, ಕ್ರಿಕೆಟಿಗ ಕೆಎಲ್ ರಾಹುಲ್ ಕರ್ನಾಟಕ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.
ಪ್ರಶಸ್ತಿ ಪಡೆದ ಬಳಿಕ ಮಾತನಾಡಿರುವ ರಾಹುಲ್ ಕರ್ನಾಟಕ ಸರ್ಕಾರದಿಂದ ಈ ಪ್ರಶಸ್ತಿ ಸ್ವೀಕರಿಸಲು ಹೆಮ್ಮೆಯೆನಿಸುತ್ತದೆ. ನನ್ನ ಕೋಚ್ ಗಳು, ಸಹ ಕ್ರಿಕೆಟಿಗರು,ಸ್ನೇಹಿತರು ಮತ್ತು ಕುಟುಂಬದ ಬೆಂಬಲವಿಲ್ಲದೇ ಏನನ್ನೂ ಸಾಧಿಸಲಾಗುತ್ತಿರಲಿಲ್ಲ. ನಾನು ಮುಂದೆಯೂ ನಮ್ಮ ರಾಜ್ಯ ಮತ್ತು ದೇಶ ಹೆಮ್ಮೆ ಪಡುವ ಕೆಲಸ ಮಾಡುತ್ತೇನೆ ಎಂದು ರಾಹುಲ್ ಹೇಳಿಕೊಂಡಿದ್ದಾರೆ.