ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಚೊಚ್ಚಲ ಏಕದಿನ ಪಂದ್ಯವಾಡಿದ ಮೊಹಮ್ಮದ್ ಸಿರಾಜ್ ಬೇಡದ ದಾಖಲೆಯೊಂದನ್ನು ಮಾಡಿದ್ದಾರೆ.
ಚೊಚ್ಚಲ ಪಂದ್ಯದಲ್ಲಿ 10 ಓವರ್ ಬೌಲಿಂಗ್ ಮಾಡಿದ ಸಿರಾಜ್ ವಿಕೆಟ್ ಇಲ್ಲದೇ 76 ರನ್ ನೀಡಿದರು. ಈ ಮೂಲಕ ವಿಕೆಟ್ ಇಲ್ಲದೇ ಚೊಚ್ಚಲ ಪಂದ್ಯದಲ್ಲೇ ಅತೀ ಹೆಚ್ಚು ರನ್ ಬಿಟ್ಟುಕೊಟ್ಟ ದ್ವಿತೀಯ ಭಾರತೀಯ ಬೌಲರ್ ಎಂಬ ಕುಖ್ಯಾತಿಗೆ ಪಾತ್ರರಾದರು. ಇದಕ್ಕೂ ಮೊದಲು ಕರ್ಸನ್ ಘಾವ್ರಿ 11 ಓವರ್ ಗಳಲ್ಲಿ 83 ರನ್ ಬಿಟ್ಟುಕೊಟ್ಟು ಮೊದಲ ಸ್ಥಾನದಲ್ಲಿದ್ದಾರೆ.
ಇನ್ನು, ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಆರಂಭಿಕರಾಗಿ ಅಪರೂಪದ ದಾಖಲೆಯೊಂದನ್ನು ಮಾಡಿದರು. ಇಬ್ಬರೂ ಏಕದಿನ ಪಂದ್ಯಗಳಲ್ಲಿ 4000 ರನ್ ಗಳ ಜತೆಯಾಟವಾಡಿ ಸಚಿನ್ ತೆಂಡುಲ್ಕರ್ ಮತ್ತು ಸೌರವ್ ಗಂಗೂಲಿ ನಂತರ ಈ ದಾಖಲೆ ಮಾಡಿದ ಖ್ಯಾತಿಗೆ ಒಳಗಾಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ