Webdunia - Bharat's app for daily news and videos

Install App

ಕೌಂಟಿ ಕ್ರಿಕೆಟ್ ಗಾಗಿ ದೇಶದ ಪರ ಆಡುವುದನ್ನು ತಪ್ಪಿಸಿಕೊಳ್ಳಲಿದ್ದಾರೆಯೇ ಆರ್ ಅಶ್ವಿನ್?!

Webdunia
ಶನಿವಾರ, 2 ಸೆಪ್ಟಂಬರ್ 2017 (08:44 IST)
ಲಂಡನ್: ಇದೇ ಮೊದಲ ಬಾರಿಗೆ ಕೌಂಟಿ ಕ್ರಿಕೆಟ್ ಆಡುತ್ತಿರುವ ಆರ್ ಅಶ್ವಿನ್  ಇದೀಗ ವಿದೇಶೀ ಕ್ಲಬ್ ಕ್ರಿಕೆಟ್ ಗಾಗಿ ದೇಶದ ಪರ ಆಡುವ ಅವಕಾಶವನ್ನೇ ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ.

 
ಇದೇ ತಿಂಗಳು ಮತ್ತು ಮುಂದಿನ ತಿಂಗಳು ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ನಡೆಯಲಿದೆ. ಆದರೆ ಕೌಂಟಿ ಕ್ರಿಕೆಟ್ ವೇಳಾಪಟ್ಟಿಯಿಂದಾಗಿ ಈ ಸರಣಿಗೆ ಅವರು ಅಲಭ್ಯರಾಗುವ ಸಾಧ್ಯತೆಯಿದೆ.

ವಾರ್ಸೆಸ್ಟರ್ ಶೈರ್ ತಂಡದ ಪರ ಆಡುತ್ತಿರುವ ಅಶ್ವಿನ್ ಗೆ ಆಸ್ಟ್ರೇಲಿಯಾ ಸರಣಿಯಿಂದ ವಿನಾಯಿತಿ ನೀಡಲು ಸ್ವತಃ ಬಿಸಿಸಿಐ ಮನಸ್ಸು ಮಾಡಿದೆ ಎನ್ನಲಾಗಿದೆ. 2018 ರಲ್ಲಿ ಭಾರತ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿನ ಪರಿಸ್ಥಿತಿಗೆ ಹೊಂದಿಕೊಳ್ಳಲು ಅಶ್ವಿನ್ ಗೆ ಕೌಂಟಿ ಕ್ರಿಕೆಟ್ ನಲ್ಲಿ ಮುಂದುವರಿಯಲು ಬಿಸಿಸಿಐ ಅನುಮತಿ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಇನ್ನೊಂದೆಡೆ ಕ್ರಿಕೆಟ್ ವಾಹಿನಿಯೊಂದಿಗೆ ಸಂದರ್ಶನ ನೀಡುತ್ತಾ ಮಾತನಾಡಿದ ಅಶ್ವಿನ್ ‘ಬಹುಶಃ ನನ್ನನ್ನು ಆಸ್ಟ್ರೇಲಿಯಾ ಸರಣಿಗಾಗುವಾಗ ಕರೆಸಿಕೊಳ್ಳಬಹುದು. ಸದ್ಯದ ಮಟ್ಟಿಗೆ ಎಲ್ಲಾ ಕೌಂಟಿ ಪಂದ್ಯಗಳಿಗೂ ಲಭ್ಯನಿರುವುದಾಗಿ ನನ್ನ ತಂಡದ ಮ್ಯಾನೇಜರ್ ಗೆ ಹೇಳಿದ್ದೇನೆ. ಈ ಬಗ್ಗೆ ಇನ್ನೂ ಸ್ಪಷ್ಟ ತೀರ್ಮಾನವಾಗಿಲ್ಲ’ ಎಂದು ಅಶ್ವಿನ್ ಹೇಳಿದ್ದಾರೆ.

ಇದನ್ನೂ ಓದಿ.. ‘ಡೇರಾ ಬಾಬಾನಿಗೆ ಹುಚ್ಚು ಹಿಡಿಯುವುದು ಖಂಡಿತಾ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments