ಪರ್ತ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಪರ್ತ್ ನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯದ ಪಿಚ್ ಟೀಂ ಇಂಡಿಯಾಗೆ ಹೇಳಿ ಮಾಡಿಸಿದ್ದಲ್ಲ ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಹೇಳಿದ್ದಾರೆ.
ಇಲ್ಲಿ ಭಾರತಕ್ಕಿಂತ ಆಸ್ಟ್ರೇಲಿಯಾ ಹೆಚ್ಚು ಯಶಸ್ಸು ಗಳಿಸಬಹುದು. ಈ ಪಿಚ್ ನಲ್ಲಿ ಆಡಲು ಭಾರತ ಲಾಯಕ್ಕಿಲ್ಲ ಎಂದು ಪಾಂಟಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಮೊದಲ ಟೆಸ್ಟ್ ಸೋತ ಹತಾಶೆಯಲ್ಲಿರುವ ಆಸ್ಟ್ರೇಲಿಯಾ ಪರ್ತ್ ನ ಬೌನ್ಸಿ ಪಿಚ್ ನಲ್ಲಿ ಟೀಂ ಇಂಡಿಯಾವನ್ನು ಸುಲಭವಾಗಿ ಕಟ್ಟಿ ಹಾಕಬಹುದು ಎಂಬ ವಿಶ್ವಾಸದಲ್ಲಿದೆ. ಅತ್ತ ಆಸೀಸ್ ನಾಯಕ ಟಿಮ್ ಪೇಯ್ನ್ ಕೂಡಾ ಇದೇ ರೀತಿಯ ಮಾತನಾಡಿದ್ದು, ಅಡಿಲೇಡ್ ನಲ್ಲಿ ಗೆದ್ದಷ್ಟು ಸುಲಭವಾಗಿ ಟೀಂ ಇಂಡಿಯಾಗೆ ಇಲ್ಲಿ ಆಡಲು ಸಾಧ್ಯವಿಲ್ಲ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ