Publish Date: Sat, 12 Dec 2020 (08:50 IST)
Updated Date: Sat, 12 Dec 2020 (08:51 IST)
ಮುಂಬೈ: ಗಾಯದಿಂದ ಚೇತರಿಸಿಕೊಂಡ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಬೆಂಗಳೂರಿನ ಎನ್ ಸಿಎನಲ್ಲಿ ಟೀಂ ಇಂಡಿಯಾ ಆರಂಭಿಕ ಫಿಟ್ನೆಸ್ ಸಾಬೀತುಪಡಿಸಿದ್ದಾರೆ.
ರೋಹಿತ್ ಶರ್ಮಾ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸಾಗಿದ್ದು, ಆಸ್ಟ್ರೇಲಿಯಾ ವಿರುದ್ಧ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಆಡಲಿದ್ದಾರೆ. ಸೋಮವಾರ ರೋಹಿತ್ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದು, 14 ದಿನಗಳ ಕಡ್ಡಾಯ ಕ್ವಾರಂಟೈನ್ ಅವಧಿ ಮುಗಿಸಿ ಮೈದಾನಕ್ಕೆ ಆಗಮಿಸಲಿದ್ದಾರೆ.