Publish Date: Thu, 01 Jul 2021 (09:10 IST)
Updated Date: Thu, 01 Jul 2021 (09:12 IST)
ದುಬೈ: ಟೀಂ ಇಂಡಿಯಾ ಹಿಟ್ ಮ್ಯಾನ್ ರೋಹಿತ್ ಶರ್ಮಾ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದು, ಆರನೇ ಸ್ಥಾನಕ್ಕೇರಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ಸ್ ನಲ್ಲಿ ಕ್ರಮವಾಗಿ 34 ಮತ್ತು 30 ರನ್ ಗಳಿಸಿದ್ದ ರೋಹಿತ್ ಆರನೇ ಸ್ಥಾನಕ್ಕೇರಿದ್ದಾರೆ. ರಿಷಬ್ ಪಂತ್ ರನ್ನು ಹಿಂದಿಕ್ಕಿ ರೋಹಿತ್ ಮೇಲಕ್ಕೇರಿದ್ದಾರೆ. ಇನ್ನು, ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ಅಗ್ರ ಸ್ಥಾನಕ್ಕೇರಿದ್ದಾರೆ.
ಇನ್ನು, ಆಲ್ ರೌಂಡರ್ ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಮೊದಲ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಇಂಗ್ಲೆಂಡ್ ನ ಬೆನ್ ಸ್ಟೋಕ್ಸ್ ಮೊದಲ ಸ್ಥಾನಕ್ಕೇರಿದ್ದಾರೆ.
Krishnaveni K
Publish Date: Thu, 01 Jul 2021 (09:10 IST)
Updated Date: Thu, 01 Jul 2021 (09:12 IST)