Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕೇಪ್ ಟೌನ್: ದ.ಆಫ್ರಿಕಾ ವಿರುದ್ಧ ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತಿರುವ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ.
ಭಾರತದ ಪರ ಏಕದಿನ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ಈ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್ ಜತೆಗೆ ಬುಮ್ರಾ ವೇಗಿಗಳಾಗಿ ಕಣಕ್ಕಿಳಿಯುತ್ತಿದ್ದಾರೆ. ಇವರಿಗೆ ಹಾರ್ದಿಕ್ ಪಾಂಡ್ಯ ಕೂಡಾ ಸಾಥ್ ನೀಡಲಿದ್ದಾರೆ.
ಶಿಖರ್ ಧವನ್ ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದು, ಕೆಎಲ್ ರಾಹುಲ್ ಸ್ಥಾನ ವಂಚಿತರಾಗಿದ್ದಾರೆ. ಧವನ್ ಜತೆಗೆ ಮುರಳಿ ವಿಜಯ್ ಇನಿಂಗ್ಸ್ ಆರಂಭಿಸಲಿದ್ದಾರೆ. ರೆಹಾನೆ ಬದಲಿಗೆ ರೋಹಿತ್ ಶರ್ಮಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ನಿರೀಕ್ಷೆಯಂತೇ ರವೀಂದ್ರ ಜಡೇಜಾ ಆಡುತ್ತಿಲ್ಲ.
ಅತ್ತ ದ.ಆಫ್ರಿಕಾ ಕೂಡಾ ನಾಲ್ವರು ವೇಗಿಗಳು ಮತ್ತು ಓರ್ವ ಸ್ಪಿನ್ನರ್ ನೊಂದಿಗೆ ಕಣಕ್ಕಿಳಿಯುತ್ತಿದೆ. ಡೇಲ್ ಸ್ಟೇನ್, ಕಗಿಸೊ ರಬಡಾ, ಮಾರ್ನೆ ಮಾರ್ಕೆಲ್ ದಾಳಿಯನ್ನು ಭಾರತ ಹೇಗೆ ಎದುರಿಸುತ್ತದೆ ಎಂದು ಕಾದು ನೋಡಬೇಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ