ಚೆನ್ನೈ: ಶ್ರೀಲಂಕಾ ಸ್ಪಿನ್ ದಿಗ್ಗಜ ಮುತ್ತಯ್ಯ ಮುರಳೀಧರನ್ ಜೀವನಗಾಥೆಯನ್ನು ಆಧರಿಸಿದ ಸಿನಿಮಾವೊಂದು ಸೆಟ್ಟೇರುತ್ತಿದ್ದು, ಆ ಸಿನಿಮಾದಲ್ಲಿ ಭಾರತದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅತಿಥಿ ಪಾತ್ರ ಮಾಡಲಿದ್ದಾರಂತೆ!
ಮುತ್ತಯ್ಯ ಪಾತ್ರಧಾರಿಯಾಗಿ ತಮಿಳು ನಟ ವಿಜಯ್ ಸೇತುಪತಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾ ಬಹುಭಾಷೆಯಲ್ಲಿ ನಿರ್ಮಾಣವಾಗುತ್ತಿದೆ. ವಿಶ್ವಖ್ಯಾತಿಯ ಸ್ಪಿನ್ ದಿಗ್ಗಜನ ಕುರಿತಾದ ಸಿನಿಮಾ ‘800’ ನಲ್ಲಿ ಈಗಾಗಲೇ ಬಾಹುಬಲಿ ಖ್ಯಾತಿಯ ರಾಣಾ ದಗ್ಗುಬತ್ತಿ ಅಭಿನಯಿಸುವುದು ಪಕ್ಕಾ ಆಗಿದೆ.
ಕೆಲವು ಮೂಲಗಳ ಪ್ರಕಾರ ಸಚಿನ್ ಕೂಡಾ ಈ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಲಿದ್ದಾರಂತೆ. ಆದರೆ ಅಧಿಕೃತವಾಗಿ ಈ ಬಗ್ಗೆ ಚಿತ್ರತಂಡದಿಂದ ಸ್ಪಷ್ಟನೆ ಬಂದಿಲ್ಲ. ಆದರೆ ಮುರಳೀಧರನ್ ಜತೆಗೆ ಸಚಿನ್ ಉತ್ತಮ ಬಾಂಧವ್ಯ ಹೊಂದಿರುವುದರಿಂದ ಇದನ್ನು ಅಲ್ಲಗಳೆಯುವಂತೆಯೂ ಇಲ್ಲ.