Publish Date: Sat, 27 Mar 2021 (11:00 IST)
Updated Date: Sat, 27 Mar 2021 (11:02 IST)
ಮುಂಬೈ: ದೇಶದೆಲ್ಲೆಡೆ ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಬೆನ್ನಲ್ಲೇ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಗೆ ಕೊರೋನಾ ಸೋಂಕು ತಗುಲಿರುವ ಸುದ್ದಿ ಬಂದಿದೆ.
ಇತ್ತೀಚೆಗಷ್ಟೇ ರೋಡ್ ಸೇಫ್ಟೀ ವರ್ಲ್ಡ್ ಸೀರೀಸ್ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಸಚಿನ್ ಆಡಿ ಭಾರತ ತಂಡಕ್ಕೆ ಗೆಲುವು ಕೊಡಿಸಿದ್ದರು. ಇದೀಗ ಕೊರೋನಾ ತಗುಲಿರುವ ವಿಚಾರವನ್ನು ಸಾಮಾಜಿಕ ಜಾಲತಾಣದ ಮೂಲಕ ಪ್ರಕಟಿಸಿದ್ದಾರೆ.
ಕೊರೋನಾ ಬಗ್ಗೆ ಎಲ್ಲಾ ಮುನ್ನೆಚ್ಚರಿಕೆ ಕೈಗೊಳ್ಳುತ್ತಿದೆ. ಹಾಗಿದ್ದರೂ ಇಂದು ಸಣ್ಣ ಪ್ರಮಾಣದ ಲಕ್ಷಣಗಳೊಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ನಾನೀಗ ನನ್ನ ವೈದ್ಯರ ಸಲಹೆಯಂತೆ ಹೋಂ ಕ್ವಾರಂಟೈನ್ ಗೊಳಗಾಗಿದ್ದೇನೆ. ನನ್ನ ಕುಟುಂಬದವರೂ ಪರೀಕ್ಷೆಗೊಳಗಾಗಿದ್ದು, ಬೇರೆ ಯಾರಿಗೂ ಪಾಸಿಟಿವ್ ವರದಿ ಬಂದಿಲ್ಲ ಎಂದು ಸಚಿನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.