ಮುಂಬೈ: ಬಿಸಿಸಿಐ ವಾರ್ಷಿಕ ವೇತನ ಗುತ್ತಿಗೆ ಪಟ್ಟಿಯಿಂದ ಧೋನಿಯನ್ನು ಕೈಬಿಟ್ಟ ಬಗ್ಗೆ ಪ್ರತಿಕ್ರಿಯಿಸಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಿರಾಕರಿಸಿದ್ದಾರೆ.
ಧೋನಿಯನ್ನು ಗುತ್ತಿಗೆಯಿಂದ ಹೊರಗಿಟ್ಟಿರುವುದು ಅವರು ಕ್ರಿಕೆಟ್ ನಿಂದ ನಿವೃತ್ತಿಯಾಗಲಿರುವ ಸೂಚನೆ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಧೋನಿ ಐಪಿಎಲ್ ಬಳಿಕ ನಿವೃತ್ತಿ ಘೋಷಿಸಬಹುದು ಎಂಬ ಮಾತುಗಳೂ ಹರಿದಾಡುತ್ತಿವೆ.
ಈ ಬಗ್ಗೆ ಬಿಸಿಸಿಐ ಅಧ್ಯಕ್ಷ ಗಂಗೂಲಿಯನ್ನು ಕೇಳಿದಾಗ ನಾನು ಇದರ ಬಗ್ಗೆ ಪ್ರತಿಕ್ರಿಯಿಸಲು ಇಷ್ಟಪಡಲ್ಲ ಎಂದಿದ್ದಾರೆ. ಹಿಂದೊಮ್ಮೆ ಧೋನಿ ನಿವೃತ್ತಿ ಬಗ್ಗೆ ಕೇಳಿದಾಗಲೂ ಗಂಗೂಲಿ ಪ್ರತಿಕ್ರಿಯಿಸಲು ನಿರಾಕರಿಸಿದ್ದರು.