Publish Date: Sat, 10 Aug 2019 (10:57 IST)
Updated Date: Sat, 10 Aug 2019 (11:01 IST)
ಮುಂಬೈ: ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಸುರೇಶ್ ರೈನಾ ಮೊಣಕಾಲಿನ ಶಸ್ತ್ರಚಿಕಿತ್ಸೆಗೊಳಗಾಗಿದ್ದು ಮುಂದಿನ ಕೆಲವು ವಾರಗಳ ಕಾಲ ಕ್ರಿಕೆಟ್ ನಿಂದ ದೂರವಿರಲಿದ್ದಾರೆ.
ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಆಡುವ ಸುರೇಶ್ ರೈನಾ ಮುಂದಿನ ಆರು ವಾರ ಕ್ರಿಕೆಟ್ ಆಡುವಂತಿಲ್ಲ. ಹೀಗಾಗಿ ಈ ಋತುವಿನ ದೇಶೀಯ ಕ್ರಿಕೆಟ್ ಪಂದ್ಯಾವಳಿಗಳು ಇನ್ನೇನು ಆರಂಭವಾಗಲಿದ್ದು, ರೈನಾ ಆರಂಭದ ಕೆಲವು ಪಂದ್ಯಗಳನ್ನು ಮಿಸ್ ಮಾಡಿಕೊಳ್ಳುವ ಸಾಧ್ಯತೆಯಿದೆ.
ಕಳೆದ ಕೆಲವು ತಿಂಗಳುಗಳಿಂದ ರೈನಾ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದಾರೆ. ಈಗ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಕೆಲವು ದಿನಗಳ ಕಾಲ ವಿಶ್ರಾಂತಿ ಅಗತ್ಯವಿದೆ. ಅವರು ಬೇಗ ಗುಣಮುಖರಾಗಲಿ ಎಂದು ಬಿಸಿಸಿಐ ಟ್ವೀಟ್ ಮಾಡಿದೆ.