Webdunia - Bharat's app for daily news and videos

Install App

ಜೂನ್‌ನಲ್ಲಿ ಟಿ20 ವಿಶ್ವಕಪ್ ಹಂಗಾಮ: ಭಾರತ ತಂಡದ ವೇಳಾಪಟ್ಟಿ ಇಲ್ಲಿದೆ

Sampriya
ಶನಿವಾರ, 18 ಮೇ 2024 (15:36 IST)
Photo Courtesy X
ಅಮೆರಿಕಾ: ಮುಂದಿನ ತಿಂಗಳು ಅಮೆರಿಕಾ ಮತ್ತು ವೆಸ್ಟ್‌ ಇಂಡೀಸ್ ಆತಿಥ್ಯದಲ್ಲಿ ಟಿ20 ವಿಶ್ವಕಪ್‌ ಕ್ರಿಕೆಟ್ ಟೂರ್ನಿ ನಡೆಯಲಿದ್ದು, ಸಿದ್ಧತೆ ಭರದಿಂದ ಸಾಗಿದೆ. ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಒಟ್ಟು ನಾಲ್ಕು ಗ್ರೂಪ್​ಗಳಿವೆ.

ಭಾರತ ಮತ್ತು ಪಾಕಿಸ್ತಾನ್ ತಂಡಗಳು ಗ್ರೂಪ್-ಎ ನಲ್ಲಿದ್ದು, ಹೀಗಾಗಿ ಮೊದಲ ಸುತ್ತಿನಲ್ಲೇ ಇಂಡೊ-ಪಾಕ್ ಕದನವನ್ನು ವೀಕ್ಷಿಸಬಹುದು. ಇದರ ಜೊತೆಗೆ ಲೀಗ್ ಹಂತದಲ್ಲಿ ಭಾರತ ತಂಡವು ಅಮೆರಿಕ ಮತ್ತು ಕೆನಡಾ ತಂಡಗಳ ವಿರುದ್ಧ ಕಣಕ್ಕಿಳಿಯಲಿದೆ.

ಬಹುನಿರೀಕ್ಷಿತ ಟಿ20 ವಿಶ್ವಕಪ್ ಜೂನ್ 2 ರಿಂದ ಶುರುವಾಗಲಿದೆ. ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿದ್ದು, ಭಾರತ ತಂಡವು ಜೂನ್ 5 ರಂದು ತನ್ನ ಮೊದಲ ಪಂದ್ಯವನ್ನಾಡಲಿದೆ.  ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಐರ್ಲೆಂಡ್ ವಿರುದ್ಧ ಆಡಲಿದೆ.   

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಜೂನ್ 9 ರಂದು ಮುಖಾಮುಖಿಯಾಗಲಿದೆ., ಈ ಪಂದ್ಯಕ್ಕೂ ನ್ಯೂಯಾರ್ಕ್​ನ ನೂತನ ಕ್ರಿಕೆಟ್​ ಸ್ಟೇಡಿಯಂ ನಸ್ಸೌ ಇಂಟರ್​ನ್ಯಾಷನಲ್ ಗ್ರೌಂಡ್​ ಆತಿಥ್ಯವಹಿಸಲಿದೆ.

ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ಜೂನ್ 12 ರಂದು ಭಾರತ ಮತ್ತು ಅಮೆರಿಕಾ ತಂಡಗಳು ಮುಖಾಮುಖಿಯಾಗಲಿದೆ. ಅಮೆರಿಕದ ಲಾಡರ್ಹಿಲ್​ನ ಸೆಂಟ್ರಲ್ ಬ್ರೋವರ್ಡ್ ಪಾರ್ಕ್ ಸ್ಟೇಡಿಯಂನಲ್ಲಿ ಜೂನ್‌ 15ರಂದು ಭಾರತ ಮತ್ತು ಕೆನಡಾ ತಂಡಗಳು ಮುಖಾಮುಖಿಯಾಗಲಿದೆ.

 ಈ ನಾಲ್ಕು ಲೀಗ್ ಪಂದ್ಯಗಳ ಬಳಿಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ 2 ತಂಡಗಳು ಸೂಪರ್-8 ಹಂತಕ್ಕೇರಲಿದೆ. ಆ ಬಳಿಕ 8 ತಂಡಗಳ ನಡುವೆ ಸೂಪರ್-8 ಪಂದ್ಯಗಳು ನಡೆಯಲಿದ್ದು, ಇದರಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳುವ ತಂಡಗಳು ಸೆಮಿಫೈನಲ್​ಗೇರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments