Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮುಂಬೈ: ಏಕದಿನ ಸರಣಿ ಮುಗಿದ ಬೆನ್ನಲ್ಲೇ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಟೆಸ್ಟ್ ಸರಣಿಯ ಮೊದಲ ಮೂರು ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.
ಯುವ ಬ್ಯಾಟ್ಸ್ ಮನ್ ರಿಷಬ್ ಪಂತ್ ಇದೇ ಮೊದಲ ಬಾರಿಗೆ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದಾರೆ. ಗಾಯಾಳುವಾಗಿದ್ದ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಜಾಗದಲ್ಲಿ ದಿನೇಶ್ ಕಾರ್ತಿಕ್ ಅವಕಾಶ ಪಡೆದಿದ್ದಾರೆ. ಗಾಯಗೊಂಡು ಕಿರು ಮಾದರಿ ಸರಣಿಯಿಂದ ಹೊರಗುಳಿದಿದ್ದ ಜಸ್ಪ್ರೀತ್ ಬುಮ್ರಾ ವಾಪಸಾಗಿದ್ದಾರೆ. ಆದರೆ ಭುವನೇಶ್ವರ್ ಕುಮಾರ್ ಗಾಯಗೊಂಡಿರುವುದರಿಂದ ಬಿಸಿಸಿಐ ವೈದ್ಯಕೀಯ ತಂಡದಿಂದ ಕ್ಲಿಯರೆನ್ಸ್ ಪಡೆದ ಬಳಿಕವಷ್ಟೇ ಆಡಲು ಸಾಧ್ಯ.
ವಿರಾಟ್ ಕೊಹ್ಲಿ ನಾಯಕರಾಗಿರುವ ಟೀಂ ಇಂಡಿಯಾ ತಂಡದಲ್ಲಿ ಕರ್ನಾಟಕ ಮೂಲದ ಕೆಎಲ್ ರಾಹುಲ್ ಮತ್ತು ಕರುಣ್ ನಾಯರ್ ಸ್ಥಾನ ಪಡೆದಿದ್ದಾರೆ. ಉಳಿದಂತೆ ತಂಡ ಇಂತಿದೆ:
ವಿರಾಟ್ ಕೊಹ್ಲಿ, ಶಿಖರ್ ಧವನ್, ಕೆಎಲ್ ರಾಹುಲ್, ಮುರಳಿ ವಿಜಯ್, ಚೇತೇಶ್ವರ ಪೂಜಾರ, ಅಜಿಂಕ್ಯಾ ರೆಹಾನೆ, ಕರುಣ್ ನಾಯರ್, ದಿನೇಶ್ ಕಾರ್ತಿಕ್, ರಿಷಬ್ ಪಂತ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಹಾರ್ದಿಕ್ ಪಾಂಡ್ಯ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಶ್ರಾದ್ಧೂಲ್ ಠಾಕೂರ್.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.