ಕೋಲ್ಕೊತ್ತಾ: ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರಿಗೆ ಸೇರಿದ ಅಪಾರ್ಟ್ ಮೆಂಟ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಲೆತ್ನಿಸಿದ್ದು, ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.
ರಾತ್ರಿ ಹೊರಗಡೆ ಹೋಗಿದ್ದ ಶಮಿ ಮತ್ತು ಪತ್ನಿ ಮನೆಗೆ ಮರಳುವಾಗ ಅವರ ಕಾರ್ ಬೈಕ್ ಒಂದಕ್ಕೆ ಡಿಕ್ಕಿ ಹೊಡೆದಿತ್ತು. ಈ ಬಗ್ಗೆ ಬೈಕ್ ಮಾಲಿಕರು ಮತ್ತು ಶಮಿ ಕಾರಿನ ಚಾಲಕನ ನಡುವೆ ವಾಗ್ವಾದ ನಡೆದಿತ್ತು. ಆ ಸಂದರ್ಭದಲ್ಲಿ ಕ್ರಿಕೆಟಿಗ ಶಮಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದರು.
ಆದರೆ ಇದರ ಪ್ರತೀಕಾರ ತೀರಿಸಿಕೊಳ್ಳಲು ಬಂದ ಯುವಕರು ಶಮಿ ವಾಸವಿದ್ದ ಅಪಾರ್ಟ್ ಮೆಂಟ್ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಮನೆ ಮೇಲೆ ದಾಳಿ ನಡೆಸಲು ಮುಂದಾದರು. ಘಟನೆ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ