ಮುಂಬೈ: ಮುಂಬರುವ ಆಸ್ಟ್ರೇಲಿಯಾ ಟೆಸ್ಟ್ ಸರಣಿಯನ್ನು ಗಮನದಲ್ಲಿಟ್ಟುಕೊಂಡು ಟೀಂ ಇಂಡಿಯಾದ ಸ್ಪಿನ್ ಜೋಡಿಗೆ ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ.
ವಿಶ್ವದ ನಂ.1,ನಂ.2 ಬೌಲರ್ ಗಳಾದ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾಗೆ ರೆಸ್ಟ್ ನೀಡಲಾಗಿದೆ. ಇವರ ಬದಲಿಗೆ ಅಮಿತ್ ಮಿಶ್ರಾ ಮತ್ತು ಜಮ್ಮು ಕಾಶ್ಮೀರದ ಯುವ ಸ್ಪಿನ್ನರ್ ಪರ್ವೇಜ್ ರಸೂಲ್ ರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ತನ್ನ ಅಧಿಕೃತ ಟ್ವಿಟರ್ ಪೇಜ್ ನಲ್ಲಿ ಬಿಸಿಸಿಐ ಈ ಬದಲಾವಣೆಯನ್ನು ಖಚಿತಪಡಿಸಿದೆ. ಜನವರಿ 26 ರಿಂದ ಟಿ-ಟ್ವೆಂಟಿ ಸರಣಿ ಆರಂಭವಾಗಲಿದ್ದು, ಒಟ್ಟು ಮೂರು ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯ ಕಾನ್ಪುರದಲ್ಲಿ ನಡೆಯಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ