ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ವೇಳೆ ಗಾಯಗೊಂಡಿದ್ದ ವೇಗಿ ಉಮೇಶ್ ಯಾದವ್ ಸರಣಿಯ ಉಳಿದ ಪಂದ್ಯಗಳಿಂದ ಹೊರಬಿದ್ದಿದ್ದಾರೆ.
ಮೊದಲ ಟೆಸ್ಟ್ ನಲ್ಲಿ ಮೊಹಮ್ಮದ್ ಶಮಿ ಗಾಯಗೊಂಡು ಸರಣಿಯಿಂದ ಹೊರನಡೆದಿದ್ದರು. ಇದೀಗ ಉಮೇಶ್ ಯಾದವ್ ಕೂಡಾ ಗಾಯದ ಗೂಡು ಸೇರಿಕೊಂಡಿರುವುದು ಟೀಂ ಇಂಡಿಯಾಗೆ ದೊಡ್ಡ ಆಘಾತ ನೀಡಿದೆ. ಉಮೇಶ್ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾಗೆ ಯುವ ವೇಗಿ ಟಿ ನಟರಾಜನ್ ಆಯ್ಕೆಯಾಗುವ ಸಾಧ್ಯತೆಯಿದೆ.