ನವದೆಹಲಿ: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಡಿಸೆಂಬರ್ 11 ರಂದು ಇಟೆಲಿಯಲ್ಲಿ ವಿವಾಹವಾದ ಮೇಲೆ ಇದೀಗ ಹನಿಮೂನ್ ಮೂಡ್ ನಲ್ಲಿದ್ದಾರೆ.
ಹನಿಮೂನ್ ಗೆಂದು ಇಟೆಲಿಯ ಫೇಮಸ್ ಹನಿಮೂನ್ ಸ್ಪಾಟ್ ರೋಮ್ ಗೆ ಈ ನವಜೋಡಿ ಹಾರಿದ್ದಾರೆ. ಇವರಿಬ್ಬರ ಕುಟುಂಬದವರು ಈಗಾಗಲೇ ಭಾರತಕ್ಕೆ ಮರಳಿದ್ದಾರೆ ಎನ್ನಲಾಗಿದೆ.
ವಿರಾಟ್-ಅನುಷ್ಕಾ ಹನಿಮೂನ್ ಮುಗಿಸಿಕೊಂಡು ಭಾರತಕ್ಕೆ ಮರಳಲಿದ್ದು, ಡಿಸೆಂಬರ್ 21 ಮತ್ತು 26 ರಂದು ಮುಂಬೈ ಮತ್ತು ನವದೆಹಲಿಯಲ್ಲಿ ಆರತಕ್ಷತೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕ್ರಿಕೆಟಿಗರು, ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಗಣ್ಯರು ಆಗಮಿಸುವ ನಿರೀಕ್ಷೆಯಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ