Publish Date: Thu, 17 Dec 2020 (08:16 IST)
Updated Date: Thu, 17 Dec 2020 (08:17 IST)
ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದಿನಿಂದ ಮೊದಲ ಟೆಸ್ಟ್ ಪಂದ್ಯ ನಡೆಯಲಿದ್ದು, ಈ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ವಿಶ್ವದಾಖಲೆ ಮಾಡುವ ಅವಕಾಶವೊಂದು ಎದುರಾಗಿದೆ.
ಹಗಲು ರಾತ್ರಿಯಾಗಿ ನಡೆಯುವ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಶತಕ ಗಳಿಸಿದರೆ ಅದು ಅವರ 42 ನೇ ಶತಕವಾಗಲಿದ್ದು, ನಾಯಕನಾಗಿ ಅತೀ ಹೆಚ್ಚು ಶತಕ ಗಳಿಸಿದ ರಿಕಿ ಪಾಂಟಿಂಗ್ ದಾಖಲೆಯನ್ನು ಅಳಿಸಿ ಹಾಕಲಿದ್ದಾರೆ. ಸದ್ಯಕ್ಕೆ ಈಗ ಇಬ್ಬರೂ 41 ಶತಕಗಳೊಂದಿಗೆ ಮೊದಲ ಸ್ಥಾನ ಹಂಚಿಕೊಂಡಿದ್ದಾರೆ.