Publish Date: Wed, 02 Dec 2020 (10:08 IST)
Updated Date: Wed, 02 Dec 2020 (10:10 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊಸ ವಿಶ್ವ ದಾಖಲೆ ಮಾಡಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತೀ ವೇಗದ 12 ಸಾವಿರ ರನ್ ಪೂರೈಸಿದ ದಾಖಲೆಯನ್ನು ಕೊಹ್ಲಿ ಮಾಡಿದ್ದಾರೆ. 12.1 ಓವರ್ ನಲ್ಲಿ ಒಂಟಿ ರನ್ ಗಳಿಸಿದ ಕೊಹ್ಲಿ ಈ ದಾಖಲೆ ಮಾಡಿದ್ದಾರೆ. 242 ನೇ ಇನಿಂಗ್ಸ್ ನಲ್ಲಿ ಕೊಹ್ಲಿ ಈ ದಾಖಲೆ ಮಾಡಿದ್ದಾರೆ. ಇದಕ್ಕೂ ಮೊದಲು 300 ಇನಿಂಗ್ಸ್ ಗಳಿಂದ ಸಚಿನ್ ತೆಂಡುಲ್ಕರ್ ಈ ದಾಖಲೆ ಮಾಡಿದ್ದರು. ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಇತ್ತೀಚೆಗಿನ ವರದಿ ಬಂದಾಗ ಶಿಖರ್ ಧವನ್ ವಿಕೆಟ್ ಕಳೆದುಕೊಂಡು 14 ಓವರ್ ಗಳಲ್ಲಿ 79 ರನ್ ಗಳಿಸಿದೆ.