ದುಬೈ: ಸದ್ಯಕ್ಕೆ ವಿಶ್ವ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ದಾಖಲೆಗಳನ್ನು ಪುಡಿಗಟ್ಟುತ್ತಾ ಸಾಗುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದೀಗ ಎಲ್ಲಾ ಮಾದರಿಯ ಕ್ರಿಕೆಟ್ ನಲ್ಲಿ ನಂ.1 ಆಗಲು ಇನ್ನೊಂದು ಹೆಜ್ಜೆಯಿಟ್ಟರೂ ಸಾಕು.
ಐಸಿಸಿ ಏಕದಿನ ಮತ್ತು ಟಿ20 ಕ್ರಿಕೆಟ್ ರ್ಯಾಂಕಿಂಗ್ ನಲ್ಲಿ ಕೊಹ್ಲಿ ಈಗಾಗಲೇ ನಂ.1 ಸ್ಥಾನದಲ್ಲಿದ್ದಾರೆ. ಆದರೆ ಟೆಸ್ಟ್ ಕ್ರಿಕೆಟ್ ನಲ್ಲಿ ಇದೀಗಷ್ಟೇ ದ್ವಿತೀಯ ಸ್ಥಾನಕ್ಕೇರಿದ್ದಾರೆ.
ಟೆಸ್ಟ್ ಕ್ರಿಕೆಟ್ ನಲ್ಲೂ ನಂ.1 ಆದರೆ ಕೊಹ್ಲಿ ಎಲ್ಲಾ ಮಾದರಿಯಲ್ಲೂ ನಂ.1 ಆದ ದಾಖಲೆಗೆ ಪಾತ್ರರಾಗಲಿದ್ದಾರೆ. ಮುಂಬರುವ ದ. ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೊಹ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡಿದರೆ ಈಗ ನಂ.1 ಆಗಿರುವ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ರನ್ನು ಹಿಂದಿಕ್ಕುವ ಅವಕಾಶವಿದೆ.
ಕೊಹ್ಲಿ ಮತ್ತು ಸ್ಮಿತ್ ನಡುವೆ 45 ಅಂಕಗಳ ವ್ಯತ್ಯಾಸವಿದೆ. ಕೊಹ್ಲಿ ಇದೀಗ 893 ಅಂಕ ಹೊಂದಿದ್ದು, ಸ್ಮಿತ್ ಗೆ 938 ಅಂಕ ಹೊಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ