ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ತೃತೀಯ ಟೆಸ್ಟ್ ಪಂದ್ಯ ಟೀಂ ಇಂಡಿಯಾಕ್ಕೆ ಈ ವರ್ಷದ ಕೊನೆಯ ಪಂದ್ಯವಾಗಿತ್ತು. ಈ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ ಶೂನ್ಯಕ್ಕೆ ಔಟಾದ ಕೊಹ್ಲಿ ದಾಖಲೆಯೊಂದನ್ನು ಮಾಡುವ ಅವಕಾಶ ಕಳೆದುಕೊಂಡು ನಿರಾಸೆ ಅನುಭವಿಸಿದ್ದಾರೆ.
ಕೊಹ್ಲಿ ಶತಕ ಭಾರಿಸಿದ್ದರೆ ಹಲವು ದಾಖಲೆಗಳು ಅವರ ಪಾಲಾಗುತ್ತಿತ್ತು. ಆದರೆ ಶೂನ್ಯಕ್ಕೆ ಔಟಾಗಿ ದಾಖಲೆಗಳನ್ನು ಮಿಸ್ ಮಾಡಿಕೊಂಡಿದ್ದಾರೆ.
ಈ ಪಂದ್ಯದಲ್ಲಿ ಭಾರತದ ಪರ ಒಂದೇ ವರ್ಷ ವಿದೇಶದಲ್ಲಿ ಅತೀ ಹೆಚ್ಚು ರನ್ ಗಳಿಸಿದ್ದ ರಾಹುಲ್ ದ್ರಾವಿಡ್ ದಾಖಲೆಯನ್ನು ಕೊಹ್ಲಿ ಮುರಿದಿದ್ದರು. ಆದರೆ ಇನ್ನೂ 98 ರನ್ ಗಳಿಸಿದ್ದರೆ ರಿಕಿ ಪಾಂಟಿಂಗ್ ಹೆಸರಿನಲ್ಲಿದ್ದ ಈ ವಿಶ್ವದಾಖಲೆಯನ್ನು ಮುರಿಯಬಹುದಿತ್ತು. ಆದರೆ ನಿರಾಸೆಯೊಂದಿಗೆ ವರ್ಷ ಮುಗಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ