ದುಬೈ: 2018 ನೇ ಸಾಲಿನ ಐಸಿಸಿ ಪ್ರಶಸ್ತಿಯಲ್ಲಿ ಹ್ಯಾಟ್ರಿಕ್ ಪ್ರಶಸ್ತಿ ಪಡೆದು ಇತಿಹಾಸ ಬರೆದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈ ಗೌರವಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ಐಸಿಸಿ ಟೆಸ್ಟ್, ಏಕದಿನ ಮತ್ತು ವರ್ಷದ ಕ್ರಿಕೆಟಿಗ ಪ್ರಶಸ್ತಿಯಲ್ಲದೆ ಟೆಸ್ಟ್ ಮತ್ತು ಏಕದಿನ ತಂಡಕ್ಕೂ ಕೊಹ್ಲಿ ನಾಯಕರಾಗಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯಲ್ಲಿ ಸಿಂಹಪಾಲು ಪಡೆದ ಕೊಹ್ಲಿಯನ್ನು ಐಸಿಸಿ ಸೂಪರ್ ಸ್ಟಾರ್ ಎಂದು ಹೊಗಳಿದೆ.
ಹ್ಯಾಟ್ರಿಕ್ ಪ್ರಶಸ್ತಿ ಪಡೆದ ಮೊದಲ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಿರುವ ಕೊಹ್ಲಿ ‘ಇದೊಂದು ಅದ್ಭುತ ಅನುಭವ. ಇಡೀ ವರ್ಷ ಮಾಡಿದ ಕಠಿಣ ಪರಿಶ್ರಮಕ್ಕೆ ಸಿಕ್ಕ ಫಲ. ಕಳೆದ ವರ್ಷ ನಾನು ಮಾತ್ರವಲ್ಲದೆ, ತಂಡವೂ ಉತ್ತಮ ಪ್ರದರ್ಶನ ತೋರಿದ್ದಕ್ಕೆ ತುಂಬಾನೇ ಖುಷಿಯಾಗುತ್ತಿದೆ. ವಿಶ್ವದಲ್ಲಿ ಸಾಕಷ್ಟು ಜನ ಕ್ರಿಕೆಟ್ ಆಡುತ್ತಿದ್ದಾರೆ. ಹೀಗಿರುವಾಗ ಐಸಿಸಿ ನನ್ನನ್ನು ಗುರುತಿಸಿ ಗೌರವಿಸಿರುವುದಕ್ಕೆ ಖುಷಿಯಾಗುತ್ತಿದೆ’ ಎಂದು ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ. ಅಷ್ಟೇ ಅಲ್ಲದೆ, ಮುಂದಿನ ದಿನಗಳಲ್ಲೂ ಇದೇ ಪ್ರದರ್ಶನ ಕಾಯ್ದುಕೊಳ್ಳಲು ಈ ಪ್ರಶಸ್ತಿಗಳು ಸ್ಪೂರ್ತಿ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ