ನ್ಯೂಯಾರ್ಕ್: ಅಮೆರಿಕದ ನಿಯತಕಾಲಿಕೆ ಫೋರ್ಬ್ಸ್ ಜಗತ್ತಿನಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುತ್ತಿರುವ ಕ್ರೀಡಾಪಟುಗಳ ಪಟ್ಟಿ ಬಿಡುಗಡೆ ಮಾಡಿದೆ. ಭಾರತೀಯ ಕ್ರಿಕೆಟ್ ತಂದದ ನಾಯಕ ವಿರಾಟ್ ಕೊಹ್ಲಿ ಕೂಡ ಈ ಪಟ್ಟಿಯಲ್ಲಿ ಸ್ಥಾನಪಡೆದಿದ್ದು, ಟಾಪ್ 100 ಕ್ರೀಡಾಪಟುಗಳಲ್ಲಿ ಸ್ಥಾನ ಪಡೆದ ವಿರಾಟ್ ಕೊಹ್ಲಿ ಭಾರತದ ಏಕೈಕ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅತೀ ಹೆಚ್ಚು ಸಂಭಾವನೆ ಪಡೆಯುತ್ತಿರುವ ಕ್ರೀಡಾಪಟುಗಳ 2017ನೇ ಫೋರ್ಬ್ಸ್ ಪಟ್ಟಿಯಲ್ಲಿ ಕೊಹ್ಲಿಗೆ 89ನೇ ಸ್ಥಾನ ಲಭಿಸಿದೆ. ಕೊಹ್ಲಿ ಒಟ್ಟು ಕಳೆದ ವರ್ಷ 22 ಮಿಲಿಯನ್ ಅಮೆರಿಕನ್ ಡಾಲರ್ ಹಣ ಸಂಭಾವನೆ ರೂಪದಲ್ಲಿ ಪಡೆದುಕೊಂಡಿದ್ದಾರೆ. ಬಿಸಿಸಿಐನಿಂದ ವೇತನ ರೂಪದಲ್ಲಿ ವಿರಾಟ್ ಒಟ್ಟು 3 ಮಿಲಿಯನ್ ಅಮೆರಿಕನ್ ಡಾಲರ್ ಪಡೆದುಕೊಂಡಿದ್ದಾರೆ. ಇನ್ನುಳಿದಂತೆ 19 ಮಿಲಿಯನ್ ಅಮೆರಿಕನ್ ಡಾಲರ್ ಹಣವನ್ನು ಇನ್ನಿತರ ಒಪ್ಪಂದಗಳ ಮೂಲಕ ಗಳಿಸಿದ್ದಾರೆ ಎಂದು ಫೋರ್ಬ್ಸ್ ನಿಯತಕಾಲಿಕೆ ತಿಳಿಸಿದೆ.
ಪೋರ್ಚುಗೀಸ್‌ನ ಫುಟ್ಬಾಲ್ ಆಟಗಾರ ಕ್ರಿಶ್ಚಿಯಾನೋ ರೊನಾಲ್ಡೊ ಈ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದಾರೆ. ರೊನಾಲ್ಡೊ ಒಟ್ಟು 93 ಮಿಲಿಯನ್ ಅಮೆರಿಕನ್ ಡಾಲರ್ ಹಣ ಸಂಪಾದನೆ ಮಾಡಿದ್ದಾರೆ. ಇನ್ನು ಎರಡನೇ ಸ್ಥಾನದಲ್ಲಿರುವ ಅಮೆರಿಕನ್ ಬಾಸ್ಕೆಟ್ ಬಾಲ್ ಸ್ಟಾರ್ ಆಟಗಾರ ಲೆಬ್ರೋನ್ ಜೇಮ್ಸ್ ಒಟ್ಟು 86.2 ಮಿಲಿಯನ್ ಡಾಲರ್ ಗಳಿಸಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/