ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ 79 ಎಸೆತಗಳಿಂದ 66 ರನ್ ಗಳಿಸಿದ ವಿರಾಟ್ ಕೊಹ್ಲಿ ಎರಡು ದಾಖಲೆಗಳನ್ನು ಮಾಡಿದ್ದಾರೆ.
ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗಿಳಿದು 10 ಸಾವಿರ ರನ್ ಗಳಿಸಿದ ಕೊಹ್ಲಿ ಈ ಮೂಲಕ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಜೊತೆಗೆ ಗೌರವ ಹಂಚಿಕೊಂಡರು.
ಇದಲ್ಲದೆ, ಏಕದಿನ ಪಂದ್ಯಗಳಲ್ಲಿ ಸತತವಾಗಿ ಐದು ಅರ್ಧಶತಕ ದಾಖಲಿಸಿದರು. ಇದರೊಂದಿಗೆ ನಾಯಕರಾಗಿ ಏಕದಿನ ಪಂದ್ಯಗಳಲ್ಲಿ ಅವರ ರನ್ ಗಳಿಕೆ 5442 ರನ್ ಗೇರಿದೆ. ಇದರೊಂದಿಗೆ ನಾಯಕರಾಗಿ ಅತೀ ಹೆಚ್ಚು ರನ್ ಗಳಿಸಿದ ಪಟ್ಟಿಯಲ್ಲಿ ದ.ಆಫ್ರಿಕಾದ ಮಾಜಿ ನಾಯಕ ಗ್ರೇಮ್ ಸ್ಮಿತ್ ರನ್ನು ಹಿಂದಿಕ್ಕಿದರು.