Publish Date: Wed, 07 Jul 2021 (13:05 IST)
Updated Date: Wed, 07 Jul 2021 (10:58 IST)
ಲಂಡನ್: ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಮುನ್ನ ಸಿಕ್ಕ ಬ್ರೇಕ್ ನಡುವೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದೈಹಿಕ ಕಸರತ್ತು ನಡೆಸುತ್ತಿದ್ದಾರೆ.
ಮಹತ್ವದ ಟೆಸ್ಟ್ ಸರಣಿಗೆ ಮುನ್ನ ಫಿಟ್ ಆಗಿರಲು ಕೊಹ್ಲಿ ಭರ್ಜರಿ ವರ್ಕೌಟ್ ಮಾಡುತ್ತಿದ್ದಾರೆ. ವೈಟ್ ಲಿಫ್ಟಿಂಗ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಕೊಹ್ಲಿ ತಾವು ಸರಣಿಗೆ ಸಿದ್ಧ ಎಂದು ಎದುರಾಳಿಗಳಿಗೆ ಸೂಚನೆ ಕೊಟ್ಟಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಬಳಿಕ ಟೀಂ ಇಂಡಿಯಾಗೆ 20 ದಿನಗಳ ಬ್ರೇಕ್ ಸಿಕ್ಕಿದೆ. ಆಗಸ್ಟ್ 4 ರಿಂದ ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ.