ದುಬೈ: ಇಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್ ಪಂದ್ಯಾಟದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು, ಭಾರತವನ್ನು ಫೀಲ್ಡಿಂಗ್‌ಗೆ ಆಹ್ವಾನಿಸಿತು.
20ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡ ಪಾಕಿಸ್ತಾನ ತಂಡ ಭಾರತದ ಗೆಲುವಿಗೆ 106ರನ್‌ಗಳ ಸಾಧಾರಣ ಗುರಿ ನೀಡಿದೆ.
ಭಾರತದ ಪರ, ಕನ್ನಡತಿ ಶ್ರೇಯಾಂಕ ಪಾಟೀಲ್ ಮತ್ತು ಅರುಂಧತಿ ರೆಡ್ಡಿ ತಲಾ ಎರಡು ವಿಕೆಟ್ ಪಡೆದು ಮಿಂಚಿದರು. ರೇಣುಕಾ ಸಿಂಗ್, ಆಶಾ ಸೋಭಾನಾ ಮತ್ತು ದೀಪ್ತಿ ಶರ್ಮಾ ಕೂಡ ಇಲ್ಲಿಯವರೆಗೆ ತಲಾ ಒಂದು ವಿಕೆಟ್ ಪಡೆದರು.
ಮಹಿಳಾ ಟಿ20 ವಿಶ್ವಕಪ್ ಎ ಗುಂಪಿನ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ ತಂಡದ ನಾಯಕಿ ಫಾತಿಮಾ ಸನಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಟಾಸ್‌ನಲ್ಲಿ ನಿರಾಸೆಯನ್ನು ವ್ಯಕ್ತಪಡಿಸಿದ್ದರು.
ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತವು ನ್ಯೂಜಿಲೆಂಡ್ ವಿರುದ್ಧ ಸೋತಿದ್ದು, ಈ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ.