Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವಾರಾಂತ್ಯದ ಕರ್ಫ್ಯೂ ಹಿನ್ನಲೆಯಲ್ಲಿ ಬಸ್ ಸಂಚಾರದ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಜನವರಿ 5ರ ಶುಕ್ರವಾರ ರಾತ್ರಿಯಿಂದ ಸೋಮವಾರ ಬೆಳಗ್ಗೆ ತನಕ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುತ್ತದೆ.
ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ (ಜನವರಿ 7,8 & 14, 15) ಸಾಮಾನ್ಯ ಜನವರಿಗೆ ಬಿಎಂಟಿಸಿ ಬಸ್ ಸೌಲಭ್ಯ ಲಭ್ಯವಿರುವುದಿಲ್ಲ. ಕೇವಲ ತುರ್ತು ಸಂದರ್ಭದಲ್ಲಿ ಮಾತ್ರ ಬಸ್ಗಳು ಸಂಚಾರ ನಡೆಸಲಿವೆ. ಅಗತ್ಯ ಸೇವೆಗಳನ್ನು ನೀಡುವ ಸಿಬ್ಭಂದಿ ಕಚೇರಿಗೆ ತೆರಳಲು ಮಾತ್ರ ಬಸ್ ಓಡಿಸಲಾಗುತ್ತದೆ.
ಅಗತ್ಯ ಸೇವೆಗಳನ್ನು ಒದಗಿಸುವ ಸಿಬ್ಬಂದಿ ಕಚೇರಿಗೆ ಹೋಗಲು ಶೇ 10ರಷ್ಟು ಬಸ್ಗಳನ್ನು ಮಾತ್ರ ಓಡಿಸಲಾಗುತ್ತದೆ. ಕಂಟೈನ್ಮೆಂಟ್ ಝೋನ್ಗಳಲ್ಲಿ ಬಸ್ ಸಂಚಾರ ಇರುವುದಿಲ್ಲ. ಅಗತ್ಯ ಸೇವೆಗಳಿಗಾಗಿ ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆ ತನಕ ಮಾತ್ರ ಬಸ್ ಸಂಚಾರ ಇರುತ್ತದೆ