Webdunia - Bharat's app for daily news and videos

Install App

ರೇವ್ ಪಾರ್ಟಿ: ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ತೆಲುಗು ನಟಿ ಹೇಮಾ

Sampriya
ಸೋಮವಾರ, 27 ಮೇ 2024 (16:26 IST)
Photo Courtesy X
ಬೆಂಗಳೂರು: ತೆಲುಗಿನ ಜನಪ್ರಿಯ ನಟಿ ಹೇಮಾ ಅವರು ಬೆಂಗಳೂರು ನಗರದ ಹೊರ ವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಸಮಯ ಕೋರಿದ್ದಾರೆ.

ಅನಾರೋಗ್ಯದ ಕಾರಣ ನೀಡಿ ಹೇಮಾ ಅವರು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಮುಂದೆ ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಕೋರಿದ್ದಾರೆ ಎಂದು ಪೊಲೀಸ್ ಮೂಲಗಳು  ತಿಳಿಸಿವೆ.

ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದ್ದ ಹಿನ್ನೆಲೆಯಲ್ಲಿ ನಟಿ ಹೇಮಾ ಸೇರಿದಂತೆ ಎಂಟು ಮಂದಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಉಳಿದವರು ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ. ಹೇಮಾ ಅವರಿಗೆ ಎರಡನೇ ಬಾರಿ ನೋಟಿಸ್ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಬಳಿಯ ಜಿಎಂ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯ ಮೇಲೆ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳ ದಾಳಿ ನಡೆಸಿ, ಸ್ಥಳದಿಂದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿತ್ತು.

ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದವರಿಂದ ಸಂಗ್ರಹಿಸಲಾದ 98 ರಕ್ತದ ಮಾದರಿಗಳ ಪೈಕಿ 86 ಮಂದಿ ಡ್ರಗ್ಸ್ ಸೇವಿಸಿರುವುದು ವರದಿಯಲ್ಲಿ ದೃಢಪಟ್ಟಿದೆ. 50ಕ್ಕೂ ಹೆಚ್ಚು ಪುರುಷರು ಮತ್ತು 30ಕ್ಕೂ ಹೆಚ್ಚು ಮಹಿಳೆಯರ ವರದಿ ಪಾಸಿಟಿವ್ ಬಂದಿದೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ. ಡ್ರಗ್ಸ್ ಪೂರೈಕೆಯ ಜೊತೆಗೆ ಸೆಕ್ಸ್ ದಂಧೆ ಕೂಡ ನಡೆಯುತ್ತಿರುವ ಸಾಧ್ಯತೆಯ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ