ನವದೆಹಲಿ: ಕಾಂಗ್ರೆಸ್ ಪ್ರಧಾನಿ ಮೋದಿ ವಿರುದ್ಧ ಟೀಕಿಸಲು ಬಳಸುವ ‘ಚೌಕೀದಾರ್ ಚೋರ್ ಹೈ’ ಎನ್ನುವ ಸ್ಲೋಗನ್ ಗೆ ಮಧ್ಯಪ್ರದೇಶದಲ್ಲಿ ಚುನಾವಣಾ ಆಯೋಗ ನಿಷೇಧ ಹೇರಿದೆ.
ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿಯನ್ನು ‘ಚೌಕೀದಾರ್ ಚೋರ್ ಹೈ’ ಎಂದು ಸ್ಲೋಗನ್ ಮೂಲಕ ಟೀಕಿಸುತ್ತಿದ್ದಾರೆ. ಆದರೆ ಮಧ್ಯಪ್ರದೇಶದಲ್ಲಿ ಚುನಾವಣೆ ಸಂದರ್ಭ ಈ ಸ್ಲೋಗನ್ ಬಳಸುವಂತಿಲ್ಲ ಎಂದು ಚುನಾವಣಾ ಆಯೋಗ ಕಾಂಗ್ರೆಸ್ ಗೆ ಸೂಚನೆ ನೀಡಿದೆ.
ಆದರೆ ಚುನಾವಣಾ ಆಯೋಗದ ನಿರ್ಧಾರ ಮರುಪರಿಶೀಲಿಸುವಂತೆ ಕಾಂಗ್ರೆಸ್ ಮನವಿ ಮಾಡಿದೆ. ಬಿಜೆಪಿ ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿ ಇದು ಆಕ್ಷೇಪಾರ್ಹ ಹೇಳಿಕೆಯಾಗಿದೆ ಎಂದಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ