ನವದೆಹಲಿ: ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ಬಿಜೆಪಿ ನೇತೃತ್ವದ ಎನ್ ಡಿಎಗೆ ಮತ್ತೆ ಬಹುಮತ ಬರುವ ಸೂಚನೆ ಸಿಕ್ಕಿದ ಬೆನ್ನಲ್ಲೇ ಯಪಿಎ ಮಿತ್ರ ಪಕ್ಷಗಳಲ್ಲಿ ಚಟುವಟಿಕೆ ಚುರುಕಾಗಿದೆ.
ಇಂದು ಬಿಎಸ್ ಪಿ ನಾಯಕಿ ಮಾಯಾವತಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯನ್ನು ಭೇಟಿ ಮಾಡಲಿದ್ದು, ಮಾತುಕತೆ ನಡೆಸಲಿದ್ದಾರೆ.
ಚಂದ್ರಬಾಬು ನಾಯ್ಡು ಕೂಡಾ ಕಾಂಗ್ರೆಸ್ ಜತೆ ಮಾತುಕತೆಯಲ್ಲಿದ್ದಾರೆ. ಒಂದು ವೇಳೆ ಯುಪಿಎ ಮಿತ್ರ ಪಕ್ಷಗಳು ಮತ್ತು ಇತರ ಪಕ್ಷಗಳಿಗೆ ಬಹುಮತ ಸಾಬೀತುಪಡಿಸಲು ಸಾಧ್ಯವಾದಷ್ಟು ಸೀಟು ಬಂದರೂ ಸರ್ಕಾರ ರಚಿಸಲು ಬೇಕಾದ ತಂತ್ರಗಾರಿಕೆಯನ್ನು ಈ ಸಂದರ್ಭದಲ್ಲಿ ಈ ನಾಯಕರು ಮಾತುಕತೆ ನಡೆಸಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ