ಬೀದರ್ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಹೊಗಳುವ ಬರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎಡವಟ್ಟು ಹೇಳಿಕೆಯೊಂದನ್ನು ನೀಡಿದ್ದಾರೆ.
ಬೀದರ್ ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಬೇಕು. ನರೇಂದ್ರ ಮೋದಿ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದ್ದಾರೆ.
ನರೇಂದ್ರ ಮೋದಿ ಹೆಸರನ್ನು ಅರ್ಧಕ್ಕೆ ಹೇಳುತ್ತಲೇ ಎಚ್ಚೆತ್ತುಕೊಂಡ ಸಿದ್ದರಾಮಯ್ಯ, ಬಳಿಕ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂದು ತಮ್ಮ ಹೇಳಿಕೆಯನ್ನು ಪೂರ್ಣಗೊಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.