Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಛತ್ತೀಸ್ ಗಢದ ಮತಗಟ್ಟೆಯ ಬಳಿ ನಕ್ಸಲರ ಅಟ್ಟಹಾಸ

ಛತ್ತೀಸ್ ಗಢದ ಮತಗಟ್ಟೆಯ ಬಳಿ ನಕ್ಸಲರ ಅಟ್ಟಹಾಸ
ಛತ್ತೀಸ್ ಗಢ , ಗುರುವಾರ, 11 ಏಪ್ರಿಲ್ 2019 (11:34 IST)
ಛತ್ತೀಸ್ ಗಢ : 2019 ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ 18 ರಾಜ್ಯ 2 ಕೇಂದ್ರಾಡಳಿತ ಪ್ರದೇಶಗಳ 91 ಕ್ಷೇತ್ರದ ವ್ಯಾಪ್ತಿಯಲ್ಲಿ ಆರಂಭವಾಗಿದೆ.


ಈ ವೇಳೆ ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯ ಫರಸ್​ಗಾಂವ್​ ಎಂಬ ಊರಿನ ಮತದಾನ ಕೇಂದ್ರದ ಬಳಿ ದುಷ್ಕರ್ಮಿಗಳು ಬಾಂಬ್ ಸ್ಫೋಟಿಸಿದ್ದಾರೆ. ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರ ಹಾವಳಿ ಹೆಚ್ಚಾಗಿದ್ದು, ಮತದಾನ ತಡೆಯುವ ನಿಟ್ಟಿನಲ್ಲಿ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.


ನಕ್ಸಲರು ಚುನಾವಣೆಯನ್ನು ಬಹಿಷ್ಕರಿಸಲು ಕರೆ ನೀಡಿದ್ದು, ಇದನ್ನು ಲೆಕ್ಕಿಸದೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದ್ದರಿಂದ  ನಕ್ಸಲರು ಮತಗಟ್ಟೆಯನ್ನು ಗುರಿಯಾಗಿಸಿಕೊಂಡು ಸ್ಪೋಟಕ ಸಿಡಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಲೋಕಸಭೆ ಮಹಾಹಬ್ಬ ಇಂದಿನಿಂದ ಶುರು: 20 ರಾಜ್ಯಗಳಲ್ಲಿ ಇಂದು ಚುನಾವಣೆ