ಬೆಂಗಳೂರು : ಸಿದ್ದರಾಮಯ್ಯನವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡವಾಗ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರು, ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಕೆಲವರು ಚಮಚಗಿರಿ ಮಾಡುತ್ತಿದ್ದಾರೆ. ಅವರೇನು ದೇವರಾಜ ಅರಸು ರೀತಿ ಆಡಳಿತ ಕೊಟ್ಟಿದ್ದಾರಾ? ಬಾಯಿ ಚಪಲಕ್ಕೆ ಮತ್ತೆ ಸಿಎಂ ಆಗುತ್ತೇನೆ ಅಂತಾರೆ ಎಂದು ಹೇಳಿದ್ದರು.
ಈ ಹೇಳಿಕೆಯ ಬಗ್ಗೆ ಬೇಸರಗೊಂಡ ಸಿದ್ದರಾಮಯ್ಯ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ವಿವರವಾಗಿ ಪ್ರತಿಕ್ರಿಯಿಸಲಾರೆ.
ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಗೆ ಕುಖ್ಯಾತರು. ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ. ಜೆಡಿಎಸ್ ಅಧ್ಯಕ್ಷ ಎಚ್.ವಿಶ್ವನಾಥ್ ಹೊಟ್ಟೆಕಿಚ್ಚಿನ ಮಾತುಗಳನ್ನು ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಮೊದಲು ಜಿ.ಟಿ.ದೇವೇಗೌಡ,ಈಗ ವಿಶ್ವನಾಥ್ ಮುಂದೆ ಯಾರು ಗೊತ್ತಿಲ್ಲ. ನನ್ನನ್ನು ಗುರಿಯಾಗಿಸಿದ ಇಂತಹ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಠರು ಗಮನ ಹರಿಸುವುದು ಒಳಿತು ಎಂದು ಟ್ವೀಟರ್ ನಲ್ಲಿ ಅಸಮಾಧಾನ ಹೊರಹಾಕಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.