Publish Date: Wed, 10 Apr 2019 (08:53 IST)
Updated Date: Wed, 10 Apr 2019 (08:54 IST)
ಮಂಡ್ಯ: ನಿನ್ನೆ ಮೈಸೂರಿನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ರೆಬಲ್ ಸ್ಟಾರ್ ಅಂಬರೀಶ್ ಹೊಗಳಿದ ಪ್ರಧಾನಿ ಮೋದಿಗೆ ಸುಮಲತಾ ಅಂಬರೀಶ್ ಧನ್ಯವಾದ ಸಲ್ಲಿಸಿದ್ದಾರೆ.
ಅಂಬರೀಶ್ ಮತ್ತು ಸುಮಲತಾ ಕನ್ನಡ ಭಾಷೆ ಮತ್ತು ಸಂಸ್ಕೃತಿಗಾಗಿ ಸೇವೆ ಮಾಡಿದ್ದರು. ಹೀಗಾಗಿ ಸುಮಲತಾರನ್ನು ಆಶೀರ್ವದಿಸಿ ಎಂದು ಪ್ರಧಾನಿ ಮೋದಿ ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದರು.
ಪ್ರಧಾನಿ ಮೋದಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಸುಮಲತಾ ಅಂಬರೀಶ್ ‘ಪ್ರಧಾನಿ ನಮ್ಮ ಬಗ್ಗೆ ಹೇಳಿದ ಒಳ್ಳೆ ಮಾತುಗಳಿಗೆ ಹೃದಯಪೂರ್ವಕ ಧನ್ಯವಾದಗಳು. ಇದು ಅಂಬರೀಶ್ ಗೆ ಸಿಕ್ಕ ಗೌರವ’ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ