Publish Date: Tue, 16 Apr 2019 (10:13 IST)
Updated Date: Tue, 16 Apr 2019 (10:15 IST)
ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಲೇ ಜೆಡಿಎಸ್ ನಾಯಕರು ಮತ್ತು ಅವರ ಆಪ್ತರ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪಾಂಡವಪುರದಲ್ಲಿರುವ ಸಚಿವ ಸಿ.ಎಸ್.ಪುಟ್ಟರಾಜು ಅವರ ಆಪ್ತ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ತಿಮ್ಮೇಗೌಡರ ಮನೆ, ಮರದ ಕಾರ್ಖಾನೆ, ಅಂಗಡಿ ಹಾಗೂ ಪೆಟ್ರೋಲ್ ಬಂಕ್ ಗಳ ಮೇಲೆ ಐಟಿ ಅಧಿಕಾರಿಗಳು ದಾಳಿನಡೆಸಿದ್ದಾರೆ.
ಅಲ್ಲದೇ ಹಾಸನ ಜಿಲ್ಲೆಯಲ್ಲಿ ಸಚಿವ ಹೆಚ್.ಡಿ.ರೇವಣ್ಣ ಅವರ ಆಪ್ತರ ಮನೆ ಮೇಲೂ ಇಂದು ಬೆಳಿಗ್ಗೆ 7:15ಕ್ಕೆ ಐಟಿ ದಾಳಿ ನಡೆದಿದ್ದು, ಜೆಡಿಎಸ್ ವಿಧಾನಪರಿಷತ್ ಮಾಜಿ ಸದಸ್ಯ ಪಟೇಲ್ ಶಿವರಾಂ, ಮುಖಂಡ ಕಾರ್ಲೆ ಇಂದ್ರೇಶ್, ಜಿಪಂ ಸದಸ್ಯ ಮೊಗಣ್ಣ ಮತ್ತಿತರರ ಮನೆ ಮೇಲೆ ಐಟಿ ದಾಳಿ ನಡೆದಿದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.