ಬೆಂಗಳೂರು : ರಾಜ್ಯದ 2 ವಿಧಾನಸಭಾ ಕ್ಷೇತ್ರಗಳಾದ ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ.
ಸಚಿವ ಶಿವಳ್ಳಿ ನಿಧನರಾದ ಹಿನ್ನಲೆಯಲ್ಲಿ ತೆರನಾದ ಕುಂದಗೋಳ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಸುಮಾ ಶಿವಳ್ಳಿ ಸ್ಪರ್ಧಿಸಿದ್ದಾರೆ. ಬಿಜೆಪಿಯಿಂದ ಚಿಕ್ಕನಗೌಡರ ಕಣದಲ್ಲಿದ್ದಾರೆ.
ಹಾಗೇ ಶಾಸಕ ಉಮೇಶ್ ಜಾಧವ್ ಅವರು ರಾಜೀನಾಮೆ ನೀಡಿದ್ದರಿಂದ ತೆರನಾದ ಚಿಂಚೋಳಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಭಾಷ್ ರಾಥೋಡ್, ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಅವಿನಾಶ್ ಜಾಧವ್ ಕಣಕ್ಕೀಳಿಯುತ್ತಿದ್ದಾರೆ.
ಮೇ 23ರಂದು ಲೋಕಸಭೆ ಚುನಾವಣೆ ಫಲಿತಾಂಶದ ದಿನವೇ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.