ನವದೆಹಲಿ : ದೇಶದ ಅತೀ ಶ್ರೀಮಂತ ಪಕ್ಷ ಯಾವುದು ಎಂಬ ಕುತೂಹಲ ಹಲವರಲ್ಲಿದ್ದು, ಇದೀಗ ಈ ಮಾಹಿತಿ ಬಹಿರಂಗವಾಗಿದೆ.
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ 2019 ರ ಫೆಬ್ರವರಿಯಲ್ಲಿ ದೇಶದ ಎಲ್ಲ ಪಕ್ಷಗಳು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಬ್ಯಾಂಕ್ ಖಾತೆಗಳ ಆಧರಿಸಿ ಈ ಮಾಹಿತಿ ತಿಳಿದುಬಂದಿದ್ದು, ಇದರಲ್ಲಿ ಬಹುಜನ ಸಮಾಜವಾದಿ ಪಕ್ಷದ ಖಾತೆಯಲ್ಲಿ 670 ಕೋಟಿ ರೂ. ಹಣವಿದ್ದು, ದೇಶದ ಅತೀ ಶ್ರೀಮಂತ ಪಕ್ಷ ಎನಿಸಿಕೊಂಡಿದೆ. ಎರಡನೇ ಸ್ಥಾನವನ್ನು ಉತ್ತರ ಪ್ರದೇಶದ ಸಮಾಜವಾದಿ ಪಕ್ಷವೇ ಹೊಂದಿದೆ. ಕಾಂಗ್ರೆಸ್ ಪಕ್ಷವೂ ಮೂರನೇ ಸ್ಥಾನದಲ್ಲಿದೆ.
ಇನ್ನು ಕಳೆದ ಐದು ವರ್ಷಗಳಲ್ಲಿ ಅತಿ ಹೆಚ್ಚು ರಾಜಕೀಯ ದೇಣಿಗೆ, ಎಲೆಕ್ಟೋರಲ್ ಬಾಂಡ್ ಪಡೆದ ಬಿಜೆಪಿ ಐದನೇ ಸ್ಥಾನದಲ್ಲಿದೆ. ಬಿಜೆಪಿ ದೇಣಿಗೆ ರೂಪದಲ್ಲಿ ಪಡೆದ ಹಣವನ್ನು ದೊಡ್ಡ ಪ್ರಮಾಣದಲ್ಲಿ ಖರ್ಚು ಮಾಡಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.