Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನಿಮ್ಮ ಮಧುಮೇಹ ನಿಯಂತ್ರಣಕ್ಕೆ ಸಿಗುತ್ತಿಲ್ಲವೇ: ಈ ಪದಾರ್ಥಗಳನ್ನು ನಿಮ್ಮ ಆಹಾರಕ್ಕೆ ಸೇರಿಸಿಕೊಳ್ಳಿ

ನಿಮ್ಮ ಮಧುಮೇಹ ನಿಯಂತ್ರಣಕ್ಕೆ ಸಿಗುತ್ತಿಲ್ಲವೇ: ಈ ಪದಾರ್ಥಗಳನ್ನು ನಿಮ್ಮ ಆಹಾರಕ್ಕೆ ಸೇರಿಸಿಕೊಳ್ಳಿ
ಬೆಂಗಳೂರು , ಶನಿವಾರ, 4 ಸೆಪ್ಟಂಬರ್ 2021 (07:08 IST)
ಅತಿಯಾದ ಮಾನಸಿಕ ಒತ್ತಡ ಮತ್ತು ಸರಿಯಾದ ಆಹಾರ ಕ್ರಮ ಪಾಲಿಸದೆ ಇರುವುದರಿಂದ ಅನೇಕ ಜನರಿಗೆ ಚಿಕ್ಕ ವಯಸ್ಸಿನಲ್ಲಿಯೇ ಮಧುಮೇಹ ಬರುತ್ತಿರುವುದನ್ನು ನಾವು ಕಾಣಬಹುದಾಗಿದೆ.

ನಮ್ಮ ದೇಶದಲ್ಲಿ ಬಹುತೇಕರು ಮಧುಮೇಹದಿಂದ ಬಳಲುತ್ತಿದ್ದಾರೆ ಎಂದರೆ ತಪ್ಪಾಗುವುದಿಲ್ಲ. ಹಾಗಾಗಿ ನಮ್ಮ ದೇಹದಲ್ಲಿರುವ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಆರೋಗ್ಯಕರವಾಗಿ ಕಾಪಾಡಿಕೊಳ್ಳುವುದು ಅವಶ್ಯಕವಾಗಿದೆ. ಇದು ನಿಯಂತ್ರಣ ತಪ್ಪಿದ್ದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ, ಹಾಗಾಗಿ ಸರಿಯಾದ ಆಹಾರ ಸೇವನೆ ಮತ್ತು ವ್ಯಾಯಾಮ ಮಾಡುವುದು ತುಂಬಾ ಅವಶ್ಯಕವಾಗಿದೆ.
ಅನಿಯಂತ್ರಿತ ರಕ್ತದಲ್ಲಿನ ಸಕ್ಕರೆ ಮಟ್ಟವು ಏರುಪೇರು ಆಗುವುದಕ್ಕೆ ಹಲವಾರು ಕಾರಣಗಳಿವೆ. ಆರೋಗ್ಯಕರ ಆಹಾರ ಸೇವಿಸದೆ ಇರುವುದು, ಸರಿಯಾದ ಸಮಯಕ್ಕೆ ಹಸಿವಾದಾಗ ಊಟ ಮಾಡದೆ ಹಾಗೆ ಇರುವುದು. ನಮ್ಮ ಜಡತ್ವ ಜೀವನಶೈಲಿ, ಅತಿಯಾದ ಮಾನಸಿಕ ಒತ್ತಡ ಇವೆಲ್ಲವೂ ಕಾರಣವಾಗುತ್ತವೆ. ಗಾಬರಿ ಪಡುವಂತಹ ಅವಶ್ಯಕತೆ ಇಲ್ಲ. ಏಕೆಂದರೆ ಮಧುಮೇಹ ಎಂಬ ಮಹಾಮಾರಿ ಕಾಯಿಲೆಯಿಂದ ಪಾರಾಗಬಹುದು ಮತ್ತು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.
ಇತ್ತೀಚೆಗೆ ಮಧುಮೇಹ ಜನರಲ್ಲಿ ಹೆಚ್ಚಾಗುತ್ತಿದ್ದು, ಪೌಷ್ಟಿಕ ತಜ್ಞೆ ನ್ಮಾಮಿ ಅಗರ್ವಾಲ್ ಮಧುಮೇಹಿಗಳು ತಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕಾದ ಮಸಾಲೆ ಪದಾರ್ಥಗಳ ಮತ್ತು ಕೆಲವು ಔಷಧೀಯ ಗುಣ ಹೊಂದಿರುವಂತಹ ಗಿಡ ಮೂಲಿಕೆಗಳ ಬಗ್ಗೆ ಹೇಳಿದ್ದಾರೆ. ನಮ್ಮ ಅಡುಗೆ ಮನೆಯಲ್ಲಿಯೇ ವಿವಿಧ ರೀತಿಯ ಮಸಾಲೆ ಪದಾರ್ಥಗಳು ಇರುತ್ತವೆ. ಇವು ಹಲವಾರು ಔಷಧೀಯ ಗುಣಗಳು ಮತ್ತು ಆರೋಗ್ಯ ಪ್ರಯೋಜನಗಳಿಂದ ತುಂಬಿರುತ್ತವೆ.
webdunia

ನೀವು ಮಧುಮೇಹಿಯಾಗಿದ್ದರೆ, ಈ ತಜ್ಞರು ಹೇಳಿದಂತಹ ಮಸಾಲೆ ಪದಾರ್ಥಗಳನ್ನು ಮತ್ತು ಗಿಡಮೂಲಿಕೆಯನ್ನು ನಿಮ್ಮ ಅಡುಗೆಯಲ್ಲಿ ಸೇರಿಸಿಕೊಳ್ಳಲು ಮರೆಯಬೇಡಿ.
ಅರಿಶಿನ
ಪೌಷ್ಟಿಕ ತಜ್ಞರ ಪ್ರಕಾರ, ಅರಿಶಿನದಲ್ಲಿ ಬಲವಾದ ಉತ್ಕರ್ಷಣ ನಿರೋಧಕವಾಗಿದೆ ಮತ್ತು ಇದು ಮಧುಮೇಹಕ್ಕೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ. ಅರಿಶಿನವು ದೇಹಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಅರಿಶಿನವು ಉರಿಯೂತ ನಿವಾರಕ ಗುಣಲಕ್ಷಣವನ್ನು ಹೊಂದಿದೆ. ನಿಮ್ಮ ದಿನನಿತ್ಯ ನೀವು ತಯಾರಿಸಿಕೊಳ್ಳುವ ಆಹಾರದಲ್ಲಿ ಅರಿಶಿನವನ್ನು ಅನೇಕ ರೀತಿಯಲ್ಲಿ ಸೇರಿಸಿಕೊಳ್ಳಬಹುದು.
ಮೆಂತ್ಯೆ
"ಮೆಂತ್ಯೆ ಬೀಜಗಳು ಜೀರ್ಣಕ್ರಿಯೆಯನ್ನು ನಿಧಾನಗೊಳಿಸಿ ಮತ್ತು ಕಾರ್ಬೋಹೈಡ್ರೇಟ್ಗಳ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ" ಎಂದು ಅಗರ್ವಾಲ್ ಹೇಳುತ್ತಾರೆ. ಮೆಂತ್ಯೆ ಬೀಜಗಳು ನಿಮ್ಮ ಹೃದಯಕ್ಕೆ ಒಳ್ಳೆಯದು. ಏಕೆಂದರೆ ಅವು ಕೊಲೆಸ್ಟ್ರಾಲ್ ಮಟ್ಟ ನಿಯಂತ್ರಿಸಲು ಮತ್ತು ಉರಿಯೂತ ಕಡಿಮೆ ಮಾಡಲು ಸಹಾಯ ಮಾಡುತ್ತವೆ.
ತುಳಸಿ
ತುಳಸಿ ರೋಗ ನಿರೋಧಕ ಶಕ್ತಿ ಉತ್ತಮಗೊಳಿಸಿ ದೇಹವನ್ನು ಬಲಪಡಿಸುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡಲು ತುಳಸಿ ತುಂಬಾ ಸಹಾಯ ಮಾಡುತ್ತದೆ ಎಂದು ಪೌಷ್ಟಿಕ ತಜ್ಞರು ಹೇಳುತ್ತಾರೆ. ತುಳಸಿ ಒತ್ತಡವನ್ನು ಕಡಿಮೆ ಮಾಡಿ ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ ಎಂದು ತಿಳಿದುಬಂದಿದೆ.
ದಾಲ್ಚಿನ್ನಿ
ದಾಲ್ಚಿನ್ನಿಯಲ್ಲಿ ವೈರಸ್ ವಿರೋಧಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರ ವಿರೋಧಿ ಗುಣಗಳು ಇದೆ. ಇದನ್ನು ಆಹಾರದಲ್ಲಿ ಸೇರಿಸಿಕೊಂಡು ತಿನ್ನುವುದರಿಂದ ಉರಿಯೂತ ಕಡಿಮೆಯಾಗುತ್ತದೆ. ಅಧ್ಯಯನಗಳ ಪ್ರಕಾರ, ದಾಲ್ಚಿನ್ನಿ ಮಧುಮೇಹದ ಅಪಾಯ ಕಡಿಮೆ ಮಾಡಲು ಸಹಾಯ ಮಾಡುತ್ತದೆ. "ಎಲ್ಲಾ ಗಿಡಮೂಲಿಕೆಗಳಲ್ಲಿ, ದಾಲ್ಚಿನ್ನಿಯು ಅತ್ಯಂತ ಶಕ್ತಿಶಾಲಿ ಗಿಡಮೂಲಿಕೆಯಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸೀತಾಫಲ ತಿನ್ನಲು ಮಾತ್ರವಲ್ಲ ,ಸೌ೦ದರ್ಯಕ್ಕೂ ಬೇಕು ಇಲ್ಲಿದೆ ನೋಡಿ ಮಾಹಿತಿ