ಬೆಂಗಳೂರು : ಬಾಳೆಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಇದರಿಂದ ಹಲ್ವಾ ಕೂಡ ತಯಾರಿಸಬಹುದು. ಅದು ಹೇಗೆ ಎಂಬುದನ್ನು ತಿಳಿಯೋಣ ಬನ್ನಿ.
ಬೇಕಾಗುವ ಸಾಮಾಗ್ರಿಗಳು: 5 ಬಾಳೆಹಣ್ಣು, ½ ಕೆಜಿ ಬೆಲ್ಲ, ತುಪ್ಪ, ಗೋಡಂಬಿ, ಏಲಕ್ಕಿ ಪುಡಿ.
ಮಾಡುವ ವಿಧಾನ : ಬಾಳೆಹಣ್ಣಿನ ಸಿಪ್ಪೆ ತೆಗೆದು ಪೀಸ್ ಮಾಡಿ ಮಿಕ್ಸಿಯಲ್ಲಿ ನುಣ್ಣಗೆ ರುಬ್ಬಿ. ಬಳಿಕ ಒಂದು ಬಾಣಲೆಯಲ್ಲಿ ನೀರನ್ನು ಹಾಕಿ ಬೆಲ್ಲವನ್ನು ಕರಗಿಸಿ. ಆಮೇಲೆ ಇನ್ನೊಂದು ಬಾಣಲೆಯಲ್ಲಿ 2 ಚಮಚ ತುಪ್ಪ ಹಾಕಿ ಗೋಡಂಬಿ ಹಾಕಿ ಫ್ರೈ ಮಾಡಿ ತೆಗೆಯಿರಿ.
ಮತ್ತೆ ತುಪ್ಪಕ್ಕೆ ರುಬ್ಬಿದ ಬಾಲೆಹಣ್ಣನ್ನು ಹಾಕಿ 5 ನಿಮಿಷ ಫ್ರೈ ಮಾಡಿ. ಅದಕ್ಕೆ ಬೆಲ್ಲದ ನೀರನ್ನು ಹಾಕಿ ಮಿಕ್ಸ್ ಮಾಡಿ. ಮತ್ತೆ ಅದಕ್ಕೆ ತುಪ್ಪ ಹಾಕುತ್ತಾ ಅಂಟಾಗುವವರೆಗೂ ಮಿಕ್ಸ್ ಮಾಡಿ. ಬಳಿಕ ಅದಕ್ಕೆ ಏಲಕ್ಕಿ ಪುಡಿ ಮತ್ತು ಗೋಡಂಬಿ ಹಾಕಿ ಮಿಕ್ಸ್ ಮಾಡಿ. ಬಳಿಕ ತುಪ್ಪ ಸವರಿದ ಪಾತ್ರೆಗೆ ಹಾಕಿ. ತಣ್ಣಗಾದ ಮೇಲೆ ಬೇಕಾದ ಆಕಾರಕ್ಕೆ ಕಟ್ ಮಾಡಿ.