Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸೀಬೆ ಗಿಡದ ಎಲೆಗಳಲ್ಲಿದೆ ಔಷಧೀಯ ಗುಣಗಳು!

ಸೀಬೆ ಗಿಡದ ಎಲೆಗಳಲ್ಲಿದೆ ಔಷಧೀಯ ಗುಣಗಳು!
ಬೆಂಗಳೂರು , ಸೋಮವಾರ, 30 ಏಪ್ರಿಲ್ 2018 (14:41 IST)
ಬೆಂಗಳೂರು: ಸೀಬೆಹಣ್ಣಿನ  ಗಿಡದ ಎಲೆಗಳಲ್ಲಿ ಸಾಕಷ್ಟು ಔಷಧಿಯ ಗುಣದಲ್ಲಿದೆ. ಆಯುರ್ವೇದದಲ್ಲಿ ಈ ಗಿಡಗ ಎಲೆಗಳಲ್ಲಿರುವ ಅದ್ಭುತ ಗುಣಗಳನ್ನು ಪ್ರಸ್ತಾಪಿಸಲಾಗಿದೆ. ಅಲ್ಲದೇ ಹಲವು ಪಾಲಿಫಿನಾಲ್, ಕ್ಯಾರೋಟಿನಾಯ್ಡ್, ಫ್ಲೇವನಾಯ್ಡ್ ಗಳೆಂಬ ವಿವಿಧ ಪೋಷಕಾಂಶಗಳಿದ್ದು ಹಲವು ರೋಗಗಳ ಚಿಕಿತ್ಸೆಗೆ ನೆರವಾಗುತ್ತವೆ.


ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣ: ಸಂಶೋಧನೆಗಳ ಮೂಲಕ ಸೀಬೆ ಎಲೆಗಳನ್ನು ಕುದಿಸಿದ ಟೀ ಮೂರು ತಿಂಗಳವರೆಗೆ ಸತತವಾಗಿ ಕುಡಿಯುವ ಮೂಲಕ ರಕ್ತದಲ್ಲಿ ಕೆಟ್ಟ ಕೊಲೆಸ್ಟರಾಲ್ ಹಾಗೂ ಟ್ರೈಗ್ಲಿಸರಾಯ್ಡ್ ಎಂಬ ವಿಷವಸ್ತುಗಳನ್ನು ಕಡಿಮೆಗೊಳಿಸುತ್ತದೆ.

ಅತಿಸಾರವನ್ನು ಶಮನಗೊಳಿಸುತ್ತದೆ: ಮಕ್ಕಳಲ್ಲಿ ಹಾಗೂ ಹಿರಿಯರಲ್ಲಿ ಅತಿಸಾರ ಮತ್ತು ಆಮಶಂಕೆಯನ್ನು ನಿವಾರಿಸಲು ಸೀಬೆ ಎಲೆಗಳ ಮಿಶ್ರಣ ಒಂದು ಉತ್ತಮ ಆಯುರ್ವೇದ ಔಷಧಿಯಾಗಿದೆ.

ಜೀರ್ಣಶಕ್ತಿಯನ್ನು ಹೆಚ್ಚಿಸುವುದು: ಸೀಬೆ ಎಲೆಗಳ ಮಿಶ್ರಣದಲ್ಲಿ ಜೀರ್ಣಕ್ರಿಯೆಗೆ ನೆರವಾಗುವ ಹಲವು ಪೋಷಕಾಂಶಗಳಿವೆ. ಸೀಬೆ ಎಲೆಗಳ ಕಷಾಯ ಸೇವಿಸಿದರೆ ಜೀರ್ಣ ಶಕ್ತಿ ಹೆಚ್ಚುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಪೆಂಡಿಕ್ಸ್ ಕಾಯಿಲೆಗೆ ರಾಮಬಾಣ ಈ ಮನೆಮದ್ದುಗಳು