ಬೆಂಗಳೂರು : ಹಲಸಿನ ಹಣ್ಣು ತಿನ್ನಲು ಎಷ್ಟು ರುಚಿಯೋ ಹಾಗೇ ಈ ಹಣ್ಣು ಹಲವು ರೋಗಗಳನ್ನು ಹೋಗಲಾಡಿಸುವ ಶಕ್ತಿಯನ್ನು ಹೊಂದಿದೆ. ಈ ಹಣ್ಣನ್ನು ತಿನ್ನುವುದರಿಂದ ಮನುಷ್ಯನ ಆರೋಗ್ಯಕ್ಕೆ ಎಷ್ಟು ಲಾಭಗಳಿವೆ ಎಂದು ತಿಳಿಬೇಕಾ …?
*ಒಂದು ಹಲಸಿನ ಹಣ್ಣಿನಲ್ಲಿ ಬಾಳೆಹಣ್ಣಿನಲ್ಲಿರುವಷ್ಟು ಪೊಟಾಷ್ಯಿಯಂ ಅಂಶವಿರುತ್ತದೆ. ಪೊಟಾಷ್ಯಿಯಂ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ
*ಇದರಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಸಮಸ್ಯೆಯನ್ನು ಇದು ತಡೆಯುತ್ತದೆ.
* ಇದರಲ್ಲಿ ವಿಟಮಿನ್ ಎ ಅಂಶವಿರುವುದರಿಂದ ಹಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ.
*ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಉತ್ತಮ ಪೋಷಕಾಂಶಗಳಿದ್ದು ಶೀತ, ಸೋಂಕು ಇವುಗಳನ್ನು ತಪ್ಪಿಸಲು ಸಹಕಾರಿಯಾಗಿದೆ.
*ದೇಹದಲ್ಲಿ ಖನಿಜಾಂಶಗಳ ಕೊರತೆ ಉಂಟಾದರೆ ದೇಹದಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗುತ್ತದೆ. ಹಲಸಿನ ಹಣ್ಣಿನಲ್ಲಿ ಖನಿಜಾಂಶಗಳು ಅಧಿಕವಾಗಿ ಇರುವುದರಿಂದ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ.
*ಥೈರಾಯ್ಡ್ ಗ್ರಂಥಿಯ ಆರೋಗ್ಯವನ್ನು ಈ ಹಣ್ಣು ಕಾಪಾಡುತ್ತದೆ. ದೇಹದಲ್ಲಿ ಹಾರ್ಮೋನ್ ಗಳ ಉತ್ಪತ್ತಿಯನ್ನು ಸರಿ ಪ್ರಮಾಣದಲ್ಲಿ ಇರಲು ಥೈರಾಯ್ಡ್ ಗ್ರಂಥಿ ಮುಖ್ಯ ಪಾತ್ರವಹಿಸುತ್ತದೆ.
*ಇದರಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳು ದೇಹದಲ್ಲಿ ರಕ್ತ ಸರಾಗವಾಗಿ ಹರಿಯಲು ಸಹಕಾರಿಯಾಗಿದೆ. ಮೂಳೆಗಳನ್ನು ಬಲಪಡಿಸಿ ಶರೀರದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯನ್ನು ತಡೆಗಟ್ಟುತ್ತದೆ.
*ಇದರಲ್ಲಿ ಕಬ್ಬಿಣದಂಶ ಕೂಡ ಇರುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಗೆ ಇದನ್ನು ತಿನ್ನುವುದು ಒಳ್ಳೆಯದು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ